newsfirstkannada.com

ಅಪಘಾತ.. ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು; ಮೂವರಿಗೆ ಗಂಭೀರ ಗಾಯ

Share :

Published July 4, 2024 at 10:29pm

Update July 4, 2024 at 10:30pm

  ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ

  ಬೈಕ್ ಡಿಕ್ಕಿಯಾದ ರಭಸಕ್ಕೆ ಹಾರಿ ಹೋಯ್ತು ಪ್ರಾಣಪಕ್ಷಿ

  ತಾಲೂಕು ಆಸ್ಪತ್ರೆಯಲ್ಲಿ ಮೂವರು ಗಾಯಾಳುಗಳಿಗೆ ಚಿಕಿತ್ಸೆ

ಚಿಕ್ಕೋಡಿ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ದುಂಡಪ್ಪ ಮಂಗಳೂರು (65) ಮೃತ ದುರ್ದೈವಿ.

ಜಮಖಂಡಿದಿಂದ ಚಮಕೇರಿಗೆ ಬರುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಸವದಿ ಗ್ರಾಮದ ಬಳಿ ಬೈಕ್ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ನಿಂಗಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತ ವ್ಯಕ್ತಿ ಅಥಣಿ ತಾಲೂಕಿನ ಚಮಕೇರಿ ಗ್ರಾಮದವರು ಎನ್ನಲಾಗಿದೆ.

ಇದನ್ನೂ ಓದಿ: ದರ್ಶನ್, ವಿಜಯಲಕ್ಷ್ಮಿ ಮದುವೆಗೆ ಸಾಕ್ಷಿ.. ಆಮಂತ್ರಣ ಪತ್ರಿಕೆ ದಿಢೀರ್‌ ವೈರಲ್ ಆಗಿದ್ದೇಕೆ? ಕಾರಣವೇನು? 

ನಿಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದರೆ ಗಾಯಗೊಂಡ ಮೂವರನ್ನು ಆ್ಯಂಬುಲೆನ್ಸ್ ಮುಖಾಂತರ ಅಥಣಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಅಪಘಾತ.. ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು; ಮೂವರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/07/Chikkodi-Bike-Accident.jpg

Load More