newsfirstkannada.com

ವಿದ್ಯುತ್​ ಕಂಬಕ್ಕೆ ಬೈಕ್ ಭೀಕರ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಯುವಕರು ಸಾವು

Share :

07-11-2023

    ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಉಸಿರು ಚೆಲ್ಲಿದರು

    ಮಕ್ಕಳನ್ನು ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು

    ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಆರಂಭ

ಕೊಡಗು: ವಿದ್ಯುತ್​ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿರೋ ಘಟನೆ ಸುಂಟಿಕೊಪ್ಪ ಸಮೀಪದ ಬರ್ಚ್ ವುಡ್ ರೆಸಾರ್ಟ್ ಬಳಿ ನಡೆದಿದೆ.

ಉದಯ (25) ಚಂದನ್ (26) ಮೃತ ದುರ್ದೈವಿಗಳು. ಮೃತ ಇಬ್ಬರು ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳು. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜರಿಗೆ ಹಾರಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಬಂದು ನೋಡಿದಾಗ ಘಟನೆ ಬಗ್ಗೆ ಗೊತ್ತಾಗಿದೆ. ಸದ್ಯ ಮೃತದೇಹಗಳನ್ನು ಶವ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಲ್ಲಿ ಮುಳುಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯುತ್​ ಕಂಬಕ್ಕೆ ಬೈಕ್ ಭೀಕರ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಯುವಕರು ಸಾವು

https://newsfirstlive.com/wp-content/uploads/2023/11/fake-police-2.jpg

Load More