ಮುದ್ದಾದ ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ, ಬೆಚ್ಚಿಬಿದ್ದ ಬೆಂಗಳೂರು

author-image
Ganesh
Updated On
ಮುದ್ದಾದ ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ, ಬೆಚ್ಚಿಬಿದ್ದ ಬೆಂಗಳೂರು
Advertisment
  • ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
  • ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿದ ಪೊಲೀಸರು
  • ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದ ಆರೋಪಿ

ನಿನ್ನೆ ಇಡೀ ಬೆಂಗಳೂರು ಯುಗಾದಿ ಹಬ್ಬದ ಸಂಭ್ರಮದಲ್ಲಿತ್ತು. ಓರ್ವ ತಾಯಿ ಮಕ್ಕಳೊಂದಿಗೆ ಯುಗಾದಿ ಹಬ್ಬವನ್ನು ಮಾಡಿ ಖುಷಿಪುಡುವುದರ ಬದಲು, ಇಬ್ಬರು ಮಕ್ಕಳ ಬದುಕಿಗೇ ಕೊಳ್ಳಿ ಇಟ್ಟಿದ್ದಾಳೆ. ಹೌದು, ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಪಾಪಿ ತಾಯಿಯೊಬ್ಬಳು ಇಬ್ಬರು ಮುದ್ದಾದ ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ತವರಲ್ಲೂ, ತವರಿನಾಚೆಯೂ ಮುಖಭಂಗ.. RCBಗೆ ಇರೋ ಮುಂದಿನ ಸವಾಲುಗಳು ಏನು?

9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಲೆ ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿದ್ದಾಳೆ. ಸದ್ಯ ಕೊಲೆ ಆರೋಪಿ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಮಹಿಳೆ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ, ಆಕೆ ವಿರುದ್ಧವೇ ಕೇಸ್ ದಾಖಲಿಸಿದ BMTC ಕಂಡಕ್ಟರ್..!

ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್​ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಯುಗಾದಿ ಹೊಸ ತೊಡಕು! ಬೆಳಗಿನ ಜಾವ 3 ಗಂಟೆಯಿಂದಲೇ ಕ್ಯೂ, 1 ಕೆಜಿ ಕುರಿ ಮಾಂಸಕ್ಕೆ ಎಷ್ಟು ರೂಪಾಯಿ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment