ರಾಮನಗರದಲ್ಲಿ ಭೀಕರ ಕಾರು ಅಪಘಾತ..!
ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣ
ಘಟನಾ ಸ್ಥಳಕ್ಕೆ ರಾಮನಗರ ಪೊಲೀಸ್ರ ಭೇಟಿ
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರೋ ಘಟನೆ ತಾಲೂಕಿನ ಮುದುಗೆರೆ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ಬಳಿ ನಡೆದಿದೆ. ಮಂಜೇಶ್(28), ವಿನಯ್(23) ಮೃತ ದುರ್ದೈವಿಗಳು.
ಮೃತ ಮಂಜೇಶ್ ಎಂಬಾತ ಮದ್ದೂರು ತಾಲೂಕಿನ ಡಣಾಯಕನಪುರ ಗ್ರಾಮದ ನಿವಾಸಿ. ವಿನಯ್ ರಾಮನಗರದ ಮಂಜುನಾಥ್ ನಗರ ನಿವಾಸಿ. ಕಾರಿನಲ್ಲಿ ನಾಲ್ಕು ಜನ ಜಾಲಿಯಾಗಿ ಡ್ರೈವ್ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಇನ್ನು ಗಾಯಗೊಂಡಿರುವ ಇಬ್ಬರನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ