Advertisment

Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ.. ಇಬ್ಬರ ಬಲಿ ಪಡೆದ ರಣ ಬಿಸಿಲು

author-image
Ganesh
Updated On
Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ.. ಇಬ್ಬರ ಬಲಿ ಪಡೆದ ರಣ ಬಿಸಿಲು
Advertisment
  • ರಣ ಬಿಸಿಲಿಗೆ ಬಿಎಂಟಿಸಿ ಕಂಡಕ್ಟರ್​ ಸ್ಥಳದಲ್ಲೇ ಸಾವು
  • ಪ್ರತಿನಿತ್ಯ ಎಷ್ಟು ತಾಪಮಾನ ದಾಖಲಾಗುತ್ತಿದೆ ಗೊತ್ತಾ..?
  • ಅನಾವಶ್ಯಕ ಓಡಾಟ ಮಾಡದಂತೆ ಎಚ್ಚರಿಕೆ ಕೊಟ್ಟ ಜಿಲ್ಲಾಡಳಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಎಂಟ್ರಿ ನೀಡಿದ್ದು, ಜನರನ್ನು ತಂಪೆರೆದಿದ್ದಾನೆ. ಆದರೆ ಬಿಸಿಲ ನಾಡು ರಾಯಚೂರಲ್ಲಿ ಸದ್ಯ ಮಳೆಯ ಸೂಚನೆ ಇಲ್ಲ. ಬಿಸಿಲಿನ ತಾಪದ ತೀವ್ರತೆ ಹೆಚ್ಚಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

Advertisment

ಇದನ್ನೂ ಓದಿ:ಮಾರಕಾಸ್ತ್ರದಿಂದ ಡೆಡ್ಲಿ ಅಟ್ಯಾಕ್.. ಮಾಲೀಕನ ಕಾಪಾಡಲು ಬಂದ ವ್ಯಕ್ತಿಯನ್ನು ಮೆಚ್ಚಲೇಬೇಕು.. Video

ಹೌದು, ರಣ ಬಿಸಿಲು ಇಬ್ಬರನ್ನು ಬಲಿ ಪಡೆದಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಮಲ್ಲಯ್ಯ (45) ಹಾಗೂ ಆಂಜನೇಯ ಅನ್ನೋರು ಸಾವನ್ನಪ್ಪಿದ್ದಾರೆ. ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬಿಎಂಟಿಸಿ ಕಂಡಕ್ಟ್ ಆಗಿದ್ದ ಮಲ್ಲಯ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಲ್ಲಯ್ಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ನಿವಾಸಿ ಆಗಿದ್ದರು. ಇವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಮಧ್ಯಾಹ್ನದ ವೇಳೆ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ದುರಂತ ನಡೆದಿದೆ. ರಸ್ತೆಯಲ್ಲಿ ಕುಸಿದು ಬಿದ್ದ ತಕ್ಷಣ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಹವಾಮಾನ ಇಲಾಖೆಯಿಂದ RCB ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​.. ಆತಂಕ ಶುರು

Advertisment

ಇತ್ತ, ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲಿ ಅಂಜನೇಯ (45) ಎಂಬುವವರು ಮೃತಪಟ್ಟಿದ್ದಾರೆ. ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಬಿಸಿಲಿನ ಆರ್ಭಟ ತಾಳಲಾರದೇ ಸುಸ್ತಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಅಂದ್ಹಾಗೆ ನಿತ್ಯ ರಾಯಚೂರಲ್ಲಿ 44 ರಿಂದ 46°ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುತ್ತಿದೆ. ಅನಾವಶ್ಯಕವಾಗಿ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment