ರಾಜ್ಯದಲ್ಲಿ ಘೋರ ದುರಂತ.. ಎರಡು ಪ್ರತ್ಯೇಕ ಅಪಘಾತದಲ್ಲಿ 7 ಜನರು ಸಾವು

author-image
Veena Gangani
Updated On
ರಾಜ್ಯದಲ್ಲಿ ಘೋರ ದುರಂತ.. ಎರಡು ಪ್ರತ್ಯೇಕ ಅಪಘಾತದಲ್ಲಿ 7 ಜನರು ಸಾವು
Advertisment
  • ಚಾಲಕನ ನಿಯಂತ್ರಣ ತಪ್ಪಿ ಒಂದೇ ಕುಟುಂಬದ ಮೂವರು ಸಾವು
  • ಡೆಡ್ಲಿ ಆಕ್ಸಿಡೆಂಟ್​ನಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆ
  • ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರಲ್ಲಿ ಅಪಘಾತ

ಕಾರು ಚಾಲಕನ ನಿಯಂತ್ರಣ ತಪ್ಪಿ ಒಂದೇ ಕುಟುಂಬದ 3 ಮಂದಿ ಮೃತಪಟ್ಟಿರೋ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ಸಂಭವಿಸಿದೆ. ಗೋಪಾಲ್(60), ಶಶಿಕಲಾ (55), ದೀಪಾ (30) ಮೃತ ದುರ್ದೈವಿಗಳು.

ಇದನ್ನೂ ಓದಿ: 9 ಸಾವಿರಕ್ಕೂ ಹೆಚ್ಚು ಸಹಾಯಕ ಲೋಕೋ ಪೈಲಟ್ ಹುದ್ದೆಗಳು.. SSLC ಪಾಸ್ ಆಗಿದ್ರೆ ಸಾಕು…!

publive-image

ಬೆಂಗಳೂರಿನ ಮಲ್ಲೇಶ್ವರಂ ಮೂಲದ ಗೋಪಾಲ್ ಮತ್ತು ಅವರ ಕುಟುಂಬಸ್ಥರು ತುಮಕೂರು ಕಡೆ ಹೋಗುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್​ನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

publive-image

ಇನ್ನೂ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ ನಡೆದಿದೆ. ಬುಲೆರೋ ವಾಹನ ಹಾಗೂ ಸಾರಿಗೆ ಬಸ್ ಮಧ್ಯೆ ನಡೆದ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವರ್ಕನಹಳ್ಳಿ ಗ್ರಾಮಸ್ಥರಾದ ಶರಣಪ್ಪ (28), ಸುನೀತಾ (20), ಸೋಮವ್ವ (40) ಹಾಗೂ ತಂಗೆವ್ವ (50) ಮೃತ ದುರ್ದೈವಿಗಳು. ಪರಿಣಾಮ ಬುಲೆರೋ ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment