newsfirstkannada.com

MDMA ಮಾರುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಅರೆಸ್ಟ್​; 2.6 ಲಕ್ಷ ಮೌಲ್ಯದ ಮಾದಕ ವಸ್ತುಗಳು ಪೊಲೀಸರ ವಶ

Share :

Published August 28, 2023 at 10:17am

    ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆ ವೇಳೆ ಇಬ್ಬರು ವಶಕ್ಕೆ

    ಸುರತ್ಕಲ್​​ನ ತಡಂಬೈಲ್ ಬೀಚ್ ಬಳಿ MDMA ಮಾರುತ್ತಿದ್ದ ಡ್ರಗ್ ಪೆಡ್ಲರ್ಸ್​

    ಮಂಗಳೂರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್​ಗಳಿವರು

ಮಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, MDMA ಮಾರುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್​ಗಳನ್ನು ಸೆರೆ ಹಿಡಿದಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚುನನ್ನು ಬಂಧಿಸಿದ್ದಾರೆ.

ಸುರತ್ಕಲ್​​ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ MDMA ಮಾರುವಾಗ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಬಂಧಿತರಿಂದ 2.6 ಲಕ್ಷ ಮೌಲ್ಯದ MDMA ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಬಂಧಿತ ಆರೋಪಿಗಳ ಮೇಲೆ ಈ ಹಿಂದೆ ಕೊಲೆಯತ್ನ, ಹಲ್ಲೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳ್ಳತನ ಪ್ರಕರಣ ದಾಖಲಾಗಿತ್ತು. ಹಲವು ಮಾರ್ಗಗಳ ಮೂಲಕ ಮಂಗಳೂರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MDMA ಮಾರುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಅರೆಸ್ಟ್​; 2.6 ಲಕ್ಷ ಮೌಲ್ಯದ ಮಾದಕ ವಸ್ತುಗಳು ಪೊಲೀಸರ ವಶ

https://newsfirstlive.com/wp-content/uploads/2023/08/Drug-Pedler.jpg

Load More