/newsfirstlive-kannada/media/post_attachments/wp-content/uploads/2024/11/SMG-CHALUKYA.jpg)
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.
ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಕ್ಷೇತ್ರಕಾರ್ಯ ಕೈಗೊಂಡಾಗ ಎರಡು ಶಾಸನಗಳು ಪತ್ತೆಯಾಗಿವೆ. ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಶಾಸನಗಳು ಪತ್ತೆಯಾಗಿವೆ. ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೇಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ.
ಒಂದನೇ ಶಾಸನವು ಕ್ರಿ.ಶ 1084ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.
ಇದನ್ನೂ ಓದಿ:ಅಮ್ಮ ಬಡವಿ, ಅಪ್ಪ ಕುಡುಕ.. ಹೊಟ್ಟೆ ಹಸಿವಿನ ತಾಳಕ್ಕೆ ಬಾಲಕ ತುಳಿದ ಹಾದಿ ಅಯ್ಯೋ ಅನಿಸುತ್ತೆ..
/newsfirstlive-kannada/media/post_attachments/wp-content/uploads/2024/11/SMG-CHALUKYA-1.jpg)
ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೇ ವಿಕ್ರಮಾದಿತ್ಯನ ಕ್ರಿ.ಶ 1096ಕ್ಕೆ ಸೇರಿದ ಶಾಸನವಾಗಿದೆ. ಇದರ ಮೇಲ್ಭಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೆಖಿಸಲಾಗಿದೆ.
ಇದನ್ನೂ ಓದಿ:ಅಜ್ಮೀರ್ ದರ್ಗಾವೂ ಹಿಂದೂ ದೇವಸ್ಥಾನದ ಮೇಲೆ ಕಟ್ಟಲಾಗಿದೆ -ಕೋರ್ಟ್​ ಕಟಕಟೆಯಲ್ಲಿ ಮತ್ತೊಂದು ವಿವಾದ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us