/newsfirstlive-kannada/media/post_attachments/wp-content/uploads/2024/11/BNG-ACCIDENT.jpg)
ಬೆಂಗಳೂರು ಅಂತಾರಾಷ್ಟ್ರೀಯ ಏರ್​ಪೋರ್ಟ್​ ರಸ್ತೆಯಲ್ಲಿ ಬರುವ ಮೇಲ್ಸೇತುವೆ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಯಲಹಂಕ ಸಂಚಾರಿ ಪೊಲೀಸರು ಸ್ಥಳಗ್ಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಆಗಿದ್ದೇನು..?
ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಇದೇ ವೇಳೆ ಅತಿ ವೇಗವಾಗಿ ಬಂದ ಬಿಎಂಟಿಸಿ ವೋಲ್ವೊ ಬಸ್ ಲಾರಿಗೆ ಗುದ್ದಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.
/newsfirstlive-kannada/media/post_attachments/wp-content/uploads/2024/11/BNG-ACCIDENT-1.jpg)
ಬಸ್​ನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ. ಪ್ರಕರಣ ದಾಖಲಿಸಿಕೊಂಡಿರೋ ಯಲಹಂಕ ಸಂಚಾರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫ್ಲೈಓವರ್​​ ಮೇಲೆ ಅಪಘಾತವಾಗಿ ನಿಂತಿರುವ ಕಾರು, ಲಾರಿ ಮತ್ತು ಬಸ್​​ಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us