ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣ ಸಾವು
ಕುಡಿದು ಲಾರಿ ಕೆಳಗೆ ಮಲಗಿ ಜೀವ ಬಿಟ್ಟ ಕುಡುಕ
ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ
ಚಿತ್ರದುರ್ಗ/ಮೈಸೂರು: ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯ ಮೇಲೆ ಟ್ರಕ್ ಹರಿದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೃತ ವ್ಯಕ್ತಿ ಕುಡಿದ ಮತ್ತಿನಲ್ಲಿ ಟ್ರಕ್ ಅಡಿ ಮಲಗಿದ್ದ ಎಂಬ ಮಾಹಿತಿ ಇದೆ. ದುರ್ಘಟನಾ ಸ್ಥಳಕ್ಕೆ ಬಾಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ ಯಾರೆಂದು ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ.. ಜಮೀನಿಗೆ ಹೊರಟಿದ್ದ ದಂಪತಿ ರೈಲಿಗೆ ಸಿಲುಕಿ ಸಾವು
ಇತ್ತ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕು ಹಳೆ ಮಿರ್ಲೆ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಗುಚಿ ಚಾಲಕ ಸಾವನ್ನಪ್ಪಿದ್ದಾನೆ. ಕುಮಾರ್ ಎಂಬುವರ ಪುತ್ರ ಮನೋಜ್ (23) ಮೃತಪಟ್ಟಿದ್ದಾರೆ. ಮನೋಜ್ ಜಮೀನು ಉಳುಮೆ ಮಾಡಲು ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಚಾಮರಾಜ ನಾಲೆಯ ಏರಿಯಾದ ಮೇಲೆ ಹೋಗುತ್ತಿದ್ದಾಗ ಆಕ್ಮಸಿಕವಾಗಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಇಂದು ಮೊದಲ 6 ಓವರ್ಗಳೇ ನಿರ್ಣಾಯಕ.. ಡೇಂಜರಸ್ MMMಗಳೇ ಟೀಂ ಇಂಡಿಯಾಗೆ ಥ್ರೆಟ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್