/newsfirstlive-kannada/media/post_attachments/wp-content/uploads/2024/09/Darshan-Renukaswamy-Case-5.jpg)
ಬೆಂಗಳೂರು: ರೇಣುಕಾಸ್ವಾಮಿ ಕೇಸ್​ ಬಗ್ಗೆ ಸಮಗ್ರ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಅಂಡ್​ ಗ್ಯಾಂಗ್​ನ ಒಂದೊಂದೇ ಕರಾಳ ಮುಖಗಳು ಅನಾವಣಗೊಳ್ಳುತ್ತಿದೆ.
ಇದೀಗ ಚಾರ್ಜ್​ಶೀಟ್​ನಲ್ಲಿ ಇಬ್ಬರು ಸ್ಯಾಂಡಲ್​ವುಡ್​ನ ನಟಿಯ ಹೆಸರನ್ನೂ ಕೂಡ ಉಲ್ಲೇಖ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಆರೋಪಿ ಪ್ರದೂಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್​​ಶೀಟ್​ನಲ್ಲಿ ತಿಳಿಸಲಾಗಿದೆ.
ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಮೊಬೈಲ್ ತೆಗೆದು ಪ್ರದೂಶ್​ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್​ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಇಬ್ಬರು ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ದರ್ಶನ್​​ಗೆ ಹೇಳಿದ್ದೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾರೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us