ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸಿರೀಸ್
ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇನ್ನೂ 7 ದಿನ ಬಾಕಿ!
ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರರಿಗೆ ಕೊಕ್
ಇದೇ ತಿಂಗಳು 19ನೇ ತಾರೀಕಿನಿಂದ ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸಿರೀಸ್ ಶುರುವಾಗಲಿದೆ. ಈಗಾಗಲೇ ಬಿಸಿಸಿಐ ಸೆಲೆಕ್ಷನ್ ಕಮಿಟಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಸೀರೀಸ್ ಮೊದಲ ಟೆಸ್ಟ್ ಪಂದ್ಯ 19 ರಿಂದ 23 ರವರೆಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ.
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇನ್ನೂ 7 ದಿನ ಬಾಕಿ ಇದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಮೊದಲ ಪಂದ್ಯದ ಪ್ಲೇಯಿಂಗ್ ಎಲೆವೆನ್ನಲ್ಲಿ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ಗೆ ಸ್ಥಾನ ಸಿಗೋದು ಡೌಟ್ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕೃಷ್ಣಮಾಚಾರಿ ಶ್ರೀಕಾಂತ್ ಹೇಳಿದ್ದೇನು?
ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಿಂದ ಹೊರಬೀಳುವ ಬಗ್ಗೆ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಕೃಷ್ಣಮಾಚಾರಿ ಶ್ರೀಕಾಂತ್ ಮಾತಾಡಿದ್ದಾರೆ. ಸ್ಟಾರ್ ಆಟಗಾರರು ಟೀಮ್ಗೆ ಬಂದ ಕೂಡಲೇ ಯುವ ಆಟಗಾರರನ್ನು ತಂಡದಿಂದ ಕೈ ಬಿಡಲಾಗುತ್ತಿದೆ. ಎಷ್ಟೋ ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಸರ್ಫರಾಜ್ ಖಾನ್ ಹೊರಗುಳಿದಿರುವ ಬಗ್ಗೆ ನನಗೆ ಬೇಸರವಿದೆ. ರಿಷಭ್ ಪಂತ್ ಕೂಡ ಕಮ್ಬ್ಯಾಕ್ ಮಾಡಿದ್ದು, ಧೃವ ಜುರೆಲ್ಗೆ ಅವಕಾಶ ಸಿಗಲ್ಲ ಅನ್ನೋ ಮಾಹಿತಿ ಸಿಕ್ಕಿದೆ ಎಂದರು.
ಬಾಂಗ್ಲಾ ವಿರುದ್ಧದ ಟೆಸ್ಟ್ಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಧೃವ್ ಜುರೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
ಇದನ್ನೂ ಓದಿ: ಟೀಂ ಇಂಡಿಯಾಗೆ ಟೆನ್ಷನ್, ಟೆನ್ಷನ್; ಎದುರಾಯ್ತು 4 ಬಿಗ್ಗೆಸ್ಟ್ ಚಾಲೆಂಜ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್