newsfirstkannada.com

ಚಲಿಸುತ್ತಿದ್ದ ಕಾರಿನ ಟೈರ್​​ ಬ್ಲಾಸ್ಟ್​.. ಪಲ್ಟಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಕಾರು

Share :

Published June 30, 2024 at 2:28pm

  ಚಾಲಕನ ಕಂಟ್ರೋಲ್ ತಪ್ಪಿ ಪಲ್ಟಿಯಾದ ಕಾರು

  ಟೈರ್ ಬ್ಲಾಸ್ಟ್ ಆದಂತೆ ನಿಯಂತ್ರಣ ಕಳೆದುಕೊಂಡು ಪಲ್ಟಿ

  ಘಟನೆ ನಡೆದಿದ್ದೆಲ್ಲಿ? ಕಾರಿನಲ್ಲಿದ್ದ ನಾಲ್ವರ ಪರಿಸ್ಥಿತಿ ಏನಾಗಿದೆ?

ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ. ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್​​ ಬ್ಲಾಸ್ಟ್ ಆಗಿದೆ. ಪರಿಣಾಮ ಚಾಲಕನ ಕಂಟ್ರೋಲ್ ತಪ್ಪಿ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಎಲ್ಲಾ ಹಣೆಬರಹ ಏನೂ ಮಾಡೋಕೆ ಆಗಲ್ಲ..’ ದರ್ಶನ್​ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

ಪಲ್ಟಿ ಹೊಡೆದ ಕಾರು ಕೊಪ್ಪಳ ನಿವಾಸಿ ಉಮರ್ ಎನ್ನುವವರಿಗೆ ಸೇರಿದ್ದಾಗಿದ್ದು, ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಲಿಸುತ್ತಿದ್ದ ಕಾರಿನ ಟೈರ್​​ ಬ್ಲಾಸ್ಟ್​.. ಪಲ್ಟಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಕಾರು

https://newsfirstlive.com/wp-content/uploads/2024/06/car-Accident-4.jpg

Load More