newsfirstkannada.com

ನರೇಂದ್ರ ಮೋದಿ ‘28 ಪೈಸೆ ಪ್ರಧಾನಿ’.. ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್!

Share :

Published March 24, 2024 at 3:57pm

  ಬಿಜೆಪಿಯೇತರ ರಾಜ್ಯಗಳಿಗೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ

  ಪ್ರಧಾನಿ ಮೋದಿ ಅವರನ್ನು ನಾವು 28 ಪೈಸೆ ಪಿಎಂ ಎಂದೇ ಕರೆಯುತ್ತೇವೆ

  ಬಿಜೆಪಿ ವಿರುದ್ಧ ಕಿಡಿಕಾರಿದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ

ಚೆನ್ನೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ವರ್ಸಸ್ ಬಿಜೆಪಿಯ ಫೈಟ್ ಜೋರಾಗಿದೆ. ಪ್ರಚಾರ ಕಣದಲ್ಲಿ ಡಿಎಂಕೆ ನಾಯಕರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಅವರು ಈಗ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಿಯಾದ ಪರಿಹಾರ ನೀಡುತ್ತಿಲ್ಲ ಅನ್ನೋ ವಿಚಾರ ಲೋಕಸಭಾ ಚುನಾವಣೆಯಲ್ಲಿ ಪ್ರಚಾರದ ಅಸ್ತ್ರವಾಗಿದೆ. ಈ ಕುರಿತು ಮಾತನಾಡಿದ ಉದಯನಿಧಿ ಸ್ಟಾಲಿನ್ ಅವರು, ನಾವು ಇನ್ಮುಂದೆ ನರೇಂದ್ರ ಮೋದಿ ಅವರನ್ನು 28 ಪೈಸೆ ಪಿಎಂ ಎಂದು ಕರೆಯುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ‘ಸೊಳ್ಳೆ ಬತ್ತಿ’ ಹಚ್ಚಿ ತಿರುಗೇಟು ಕೊಟ್ಟ ಉದಯನಿಧಿ ಸ್ಟಾಲಿನ್‌; ಸನಾತನ ಧರ್ಮ ಯುದ್ಧಕ್ಕೆ ಹೊಸ ಟ್ವಿಸ್ಟ್‌

ರಾಮನಾಥಪುರಂ ಮತ್ತು ಥೆಣಿಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್ ಅವರು ನರೇಂದ್ರ ಮೋದಿ ಅವರು ಚುನಾವಣೆಯ ಸಮಯದಲ್ಲಿ ಮಾತ್ರ ತಮಿಳುನಾಡಿಗೆ ಭೇಟಿ ನೀಡುತ್ತಾರೆ. ತಮಿಳುನಾಡು ರಾಜ್ಯ ಕೇಂದ್ರ ಸರ್ಕಾರಕ್ಕೆ ನೀಡುವ ತೆರಿಗೆ ಹಣದಲ್ಲಿ ಪ್ರತಿಯೊಂದು ರೂಪಾಯಿಗೆ ಕೇವಲ 28 ಪೈಸೆಯನ್ನು ಮಾತ್ರ ನೀಡುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಮಾಡುತ್ತಿದೆ. ಬಿಜೆಪಿ ಆಡಳಿತ ರಾಜ್ಯಗಳಿಗೆ ಒಂದು ಪರಿಹಾರ ಹಾಗೂ ಬಿಜೆಪಿಯೇತರ ರಾಜ್ಯಗಳಿಗೆ ಮತ್ತೊಂದು ಪ್ರಮಾಣ ಅನುದಾನ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನು ನಾವು 28 ಪೈಸೆ ಪಿಎಂ ಎಂದೇ ಕರೆಯುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

ಮುಂದುವರಿದು ಮಾತನಾಡಿರುವ ಉದಯನಿಧಿ ಸ್ಟಾಲಿನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ NEP ಜಾರಿ ಮಾಡಿ ತಮಿಳುನಾಡು ಮಕ್ಕಳ ಭವಿಷ್ಯ ಹಾಳು ಮಾಡಲು ಮುಂದಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಮಿಳುನಾಡಿಗೆ ಭಾರೀ ಅನ್ಯಾಯವಾಗಿದೆ. ಕೇಂದ್ರದ ತಾರತಮ್ಯದ ವಿರುದ್ಧ ಹೋರಾಟ ಮಾಡುತ್ತೇವೆ.

ಡಿಎಂಕೆ ನಾಯಕ ಉದಯ್ ನಿಧಿ ಸ್ಟಾಲಿನ್ ಅವರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಮಗ. ಉದಯನಿಧಿ ಸ್ಟಾಲಿನ್ ಅವರು ಈ ರೀತಿ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಹಿಂದೆ ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದ ಹಾಗೆ ಅದನ್ನ ನಿರ್ಮೂಲನೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ನ ಕೆಂಗಣ್ಣಿಗೂ ಗುರಿಯಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನರೇಂದ್ರ ಮೋದಿ ‘28 ಪೈಸೆ ಪ್ರಧಾನಿ’.. ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್!

https://newsfirstlive.com/wp-content/uploads/2024/03/Udayanindhi-Stallin.jpg

Load More