ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ
ಅಯ್ನಾಸ್ನನ್ನು ಟಾರ್ಗೆಟ್ ಮಾಡಿದ್ದನ ಆರೋಪಿ ಪ್ರವೀಣ್ ಚೌಗಲೆ
ಬೆಳಗಾವಿಯ ಕುಡುಚಿಯಲ್ಲಿ ಆರೋಪಿ ಪ್ರವೀಣ್ ಚೌಗಲೆಯ ಬಂಧನ
ಉಡುಪಿ: ಇಲ್ಲಿನ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಕುಡುಚಿಯಲ್ಲಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಬಂಧಿತ ಆರೋಪಿ ಇಂದು ಉಡುಪಿಗೆ ಕರೆತರುತ್ತಿದ್ದಾರೆ.
ಕುಡುಚಿಯಲ್ಲಿ ಅರೆಸ್ಟ್
ಪ್ರವೀಣ್ ಅರುಣ್ ಚೌಗಲೆಯನ್ನು ಒಂದೇ ಕುಟುಂಬದ ನಾಲ್ವರನ್ನು ಕೊಂದ ಆರೋಪಿ. ಬೆಳಗಾವಿಯ ರಾಯಭಾಗ ತಾಲೂಕಿನ ಕುಡುಚಿಯಲ್ಲಿ ಪ್ರವೀಣ್ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇಂದು ವಿಚಾರಣೆಗೆ ಒಳಪಡಿಸಿ, ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಸಂಬಂಧಿಯ ಮನೆಯಲ್ಲಿದ್ದ ಆರೋಪಿ
ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ, ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಬೈಲ್ ಫೋನ್ ಸ್ವಿಚ್ ಆನ್ ಮಾಡುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿ ಹಿಡಿದಿದ್ದಾರೆ. ಆರೋಪಿ ಬೆಳಗಾವಿಯ ತನ್ನ ಸಂಬಂಧಿಯ ಮನೆಯಲ್ಲಿ ತಂಗಿದ್ದನು ಎಂದು ಬಂಧನದ ಬಳಿಕ ತಿಳಿದುಬಂದಿದೆ.
ಕೊಲೆಗಡುಕನಿಗೆ ಅಯ್ನಾಸ್ ಟಾರ್ಗೆಟ್
ಅಯ್ನಾಸ್ನನ್ನು ಕೊಲೆಗಡುಕ ಪ್ರವೀಣ್ ಅರುಣ್ ಚೌಗಲೆಯನ್ನು ಟಾರ್ಗೆಟ್ ಮಾಡಿದ್ದು, ಹೀಗಾಗಿ ನೇಜಾರಿಗೆ ಆಗಮಿಸಿ ಕೊಲೆ ಮಾಡಿದ್ದಾನೆ. ಈ ವೇಳೆ ಆಕೆಯ ತಾಯಿ ಸಹೋದರಿ, ತಮ್ಮನನ್ನು ಮುಗಿಸಿದ್ದಾನೆ.
ಇದು ಪ್ರೀತಿನಾ?
ಅಯ್ನಾಸ್ ಮತ್ತು ಪ್ರವೀಣ್ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಅಯ್ನಾಜ್ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿದ್ದಳು. ಪ್ರವೀಣ್ ಚೌಗಲೆ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಆಗಿದ್ದನು. ಪರಸ್ಪರ ದ್ವೇಷ ಅಥವಾ ಏಕಮುಖ ಪ್ರೀತಿಯಿಂದ ಆರೋಪಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ