newsfirstkannada.com

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ಹಸ್ತಾಂತರ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Share :

Published August 7, 2023 at 5:58pm

Update August 7, 2023 at 6:03pm

    ಕರಾವಳಿಯಲ್ಲಿ ಬಿಜೆಪಿ ನಾಯಕರ ಹೋರಾಟ, ಪ್ರತಿಭಟನೆ

    ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಕೇಸ್‌ಗೆ ಟ್ವಿಸ್ಟ್‌

    ಸಿಐಡಿಗೆ ಹಸ್ತಾಂತರ ಮಾಡಿ ಸಿಎಂ ಸಿದ್ದು ಸರ್ಕಾರ ಆದೇಶ

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎನ್ನಲಾದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರ ಹಾಕಿದ್ರು. ಈ ಹೋರಾಟದ ಬಳಿಕ ರಾಜ್ಯ ಸರ್ಕಾರ ಇವತ್ತು ಮಹತ್ವದ ನಿರ್ಧಾರಕ್ಕೆ ಬಂದಿದೆ. ಭಾರೀ ಚರ್ಚೆಗೆ ಗುರಿಯಾಗಿದ್ದ ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.

ಕಳೆದ ಜುಲೈ 18ರಂದು ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿತ್ತು. ಈ ಆರೋಪದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಉಡುಪಿ ಕಾಲೇಜಿಗೆ ಭೇಟಿ ನೀಡಿದ್ದರು. ಸಂಪೂರ್ಣ ಮಾಹಿತಿ ಕಲೆ ಹಾಕಿದ ಬಳಿಕ ಈಗಲೇ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಶೌಚಾಲಯದಲ್ಲಿ ವಿಡಿಯೋ ಸಾಕ್ಷ್ಯ ಸಿಕ್ಕಿದೆಯಾ ಅನ್ನೋ ಬಗ್ಗೆ ಹೇಳಲು ಸಾಧ್ಯವಿಲ್ಲ. ನಮಗೆ ಇನ್ನೂ ಸ್ವಲ್ಪ ಸಮಯ ಬೇಕು ಎಂದು ಖುಷ್ಬೂ ಸುಂದರ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಡಲಾಗಿತ್ತಾ? ಉಡುಪಿ ವಿಡಿಯೋ ಸಾಕ್ಷಿ ಬಗ್ಗೆ ಖುಷ್ಬೂ ಸುಂದರ್ ಹೇಳಿದ್ದೇನು?

ಹೀಗೆ ನಾನಾ ಸ್ವರೂಪ ಪಡೆದ ಉಡುಪಿ ಕಾಲೇಜಿನ ಈ ವಿಡಿಯೋ ಪ್ರಕರಣ ಕರಾವಳಿಯಲ್ಲಿ ರಾಜಕೀಯದ ಬಣ್ಣ ಪಡೆದಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರು ಉಡುಪಿ ಘಟನೆಯನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಲು ಯತ್ನಿಸುತ್ತಿದೆ. ಇದು ಒಂದು ದಿನ ನಡೆದ ಘಟನೆ ಅಲ್ಲ. ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಡೆಯುವ ಘಟನೆಗಳು ಉಡುಪಿ ಪ್ರಕರಣದಲ್ಲೂ ನಡೆದಿದೆ. ಅಲ್ಲಿಯ ವಿದ್ಯಾರ್ಥಿನಿಯರು ಹೇಳುವಂತೆ ಆರೇಳು ಬಾರಿ ಇಂತಹ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ಆಗಬೇಕಿತ್ತು ಎಂದು ಒತ್ತಾಯಿಸಿದ್ದರು. ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಬೇಕು ಎಂದು ರಾಜ್ಯಪಾಲರಿಗೆ ಬಿಜೆಪಿ ನಾಯಕರು ಮನವಿ ಮಾಡಿದ್ದರು.

ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ವಿರುದ್ಧ ಪ್ರತಿಭಟಿಸಿದ್ದ ಪ್ರತಿಭಟನಾಕಾರರ ವಿರುದ್ಧ FIR ದಾಖಲು

ಬಿಜೆಪಿ ನಾಯಕರ ಪ್ರತಿಭಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಕೂಡ ಉಡುಪಿಗೆ ಭೇಟಿ ಕೊಟ್ಟು ಈ ಪ್ರಕರಣದ ಬಗ್ಗೆ ಸಭೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆಗಳ ಬಳಿಕ ರಾಜ್ಯ ಸರ್ಕಾರ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಿ ಆದೇಶಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ಹಸ್ತಾಂತರ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

https://newsfirstlive.com/wp-content/uploads/2023/08/Udupi-Toilet-Case.jpg

Load More