ಪೊಲೀಸ್ ಅಧಿಕಾರಿಗಳ ಮುಂದೆ ಅಸಲಿ ಕಾರಣ ರಿವೀಲ್
ಆರೋಪಿ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು!
ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ
ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ರೋಚಕ ಮಾಹಿತಿಗಳನ್ನ ಕಲೆ ಹಾಕಿದ್ದಾರೆ. ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗಲೆ ಪೊಲೀಸರ ಮುಂದೆ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಉಡುಪಿ ಎಸ್.ಪಿ ಡಾ.ಅರುಣ್ ಅವರು ನಾಲ್ವರ ಹತ್ಯೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಉಡುಪಿ ಎಸ್.ಪಿ ಅರುಣ್ ಅವರು ಆರೋಪಿ ಪ್ರವೀಣ್ ಚೌಗುಲೆಯ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಾಲ್ವರ ಹತ್ಯೆಗೆ ಸರಿಯಾದ ಕಾರಣವನ್ನು ವಿಚಾರಣೆಯಲ್ಲಿ ಪಡೆದು ಕೊಳ್ಳುತ್ತೇವೆ. ಈ ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಈಗಾಗಲೇ ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿದೆ. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್ಗೆ ಇವತ್ತೇ ಹಾಜರು ಮಾಡುತ್ತೇವೆ. ಕುಟುಂಬ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಅಯ್ನಾಝ್ ಮತ್ತು ಪ್ರವೀಣ್ ಚೌಗುಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ