ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ
ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ಪೊಲೀಸರಿಂದ ಲಾಠಿಚಾರ್ಜ್
ಉಡುಪಿ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ರಿಂದ ಮಹತ್ವದ ಆದೇಶ
ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜೊತೆ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಉಡುಪಿಯ ನೇಜಾರು ತೃಪ್ತಿ ನಗರಕ್ಕೆ ಪೊಲೀಸರು ಆರೋಪಿಯನ್ನು ಕರೆತರುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ಶುರುವಾಗಿದೆ.
ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಕೆಲ ಕಾಲ ಪೊಲೀಸ್ ಮಹಜರು ಸ್ಥಳದಲ್ಲಿ ಆತಂಕ ಮನೆಮಾಡಿತ್ತು. ಇನ್ನೂ, ಆರೋಪಿ ಇದ್ದ ಪೊಲೀಸ್ ವಾಹನದ ಮೇಲೆ ಸ್ಥಳೀಯರು ಏಕಾಏಕಿ ನುಗ್ಗಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಜನಾಕ್ರೋಶದ ನಡುವೆ ಮಹಜರು ಮುಗಿಸಿ ಆರೋಪಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
ಈ ಕೊಲೆ ತಾನೇ ಮಾಡಿರುವುದಾಗಿ ಒಪ್ಪಿಕೊಂಡ ಆರೋಪಿ
ಈ ಮೊದಲು ಆರೋಪಿ ಪೊಲೀಸ್ ಅಧಿಕಾರಿಗಳು ಮುಂದೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಇದಾದ ಬಳಿಕ ಉಡುಪಿ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕೇಸ್ ಸಂಬಂಧ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನವೆಂಬರ್ 28ರವರೆಗೆ ಆರೋಪಿ ಪೊಲೀಸ್ ವಶದಲ್ಲಿ ಇರಲಿ ಎಂದು ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ