newsfirstkannada.com

×

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಹಂತಕನ ವಿರುದ್ಧ ಪೋಸ್ಟ್‌ ಹಾಕಿದ್ದವರಿಗೆ ಸಂಕಷ್ಟ; ಆಗಿದ್ದೇನು?

Share :

Published November 20, 2023 at 12:30pm

Update November 20, 2023 at 12:31pm

    ಹಂತಕನ ವಿರುದ್ಧ ಫೇಸ್​​ಬುಕ್​ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ಯಾರು?

    ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

    ​ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ವ್ಯಕ್ತಿಗಾಗಿ ಹುಡುಕಾಟ

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಫೇಸ್​ಬುಕ್​ನಲ್ಲಿ​ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ವ್ಯಕ್ತಿ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಮೂಲದ ಹಫೀಜ್ ಮೊಹಮದ್ ವಿರುದ್ಧ ಉಡುಪಿಯ ಟೌನ್​ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಈ ವ್ಯಕ್ತಿಯು ತನ್ನ ಫೇಸ್​ಬುಕ್​ ಅಕೌಂಟ್​ನಲ್ಲಿ, ಪ್ರಿಪರೇಷನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡಿದ್ದಾರೆ ಎಂದು ಬರೆದು ಶೇರ್ ಮಾಡಿದ್ದಾನೆ. ಅಲ್ಲದೇ ರಕ್ತದ ಪ್ರತಿಯೊಂದು ಹನಿಯು ಶಹಾದತಿಗೆ ಅರ್ಪಿಸುವ ಖುದ್ಸಿನ ಮಕ್ಕಳಿಗಾಗಿ ಎಂದು ತನ್ನ ಫೇಸ್​ಬುಕ್​​ನ ಟ್ಯಾಗ್​​ನಲ್ಲಿ ಬರೆದಿದ್ದಾನೆ.

ನೇಜಾರಿನ ನಾಲ್ವರು ಕೊಲೆಗೆ ಸಂಬಂಧಿಸಿದಂತೆ ಆರೋಪಿಯು ಪೋಸ್ಟ್ ಮಾಡಿರುವುದು ಪ್ರಚೋದನಾಕಾರಿ ಹೇಳಿಕೆಯಂತೆ ಇದೆ. ಹೀಗಾಗಿ ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕವಾಗಿ ಶಾಂತಿ ಕದಡುವ ಸಂಬಂಧ ಫೇಸ್​​ಬುಕ್​ನಲ್ಲಿ ಪೋಸ್ಟ್ ಶೇರ್ ಮಾಡಿದ ಹಿನ್ನೆಲೆಯಲ್ಲಿ ಟೌನ್​ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 155, 505(2) ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಹಂತಕನ ವಿರುದ್ಧ ಪೋಸ್ಟ್‌ ಹಾಕಿದ್ದವರಿಗೆ ಸಂಕಷ್ಟ; ಆಗಿದ್ದೇನು?

https://newsfirstlive.com/wp-content/uploads/2023/11/UDUPI-6.jpg

Load More