newsfirstkannada.com

ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ.. ಬಿಜೆಪಿಯಿಂದ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

Share :

Published July 28, 2023 at 12:13pm

Update July 28, 2023 at 12:21pm

    ಸೂಕ್ತ ತನಿಖೆಗಾಗಿ ಉಡುಪಿಯಲ್ಲಿ ಬೃಹತ್​ ಪ್ರತಿಭಟನೆ

    ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

    ನಾಯಕರಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಾಥ್​​

ಉಡುಪಿಯ ಕಾಲೇಜಿನ ವಿಡಿಯೋ ರೆಕಾರ್ಡಿಂಗ್ ವಿವಾದ ಇದೀಗ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಸೂಕ್ತ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬಿಜೆಪಿ ಬೃಹತ್​ ಪ್ರತಿಭಟನೆ ನಡೆಸುತ್ತಿದೆ.

ನಗರದಲ್ಲಿ ಬೃಹತ್ ಜಾಥಾ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾಯಕರಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಹಿಂದೂ ಕಾರ್ಯಕರ್ತರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಕಚೇರಿಯಿಂದ ಹೊರಟ ಬೃಹತ್‌ ಪ್ರತಿಭಟನಾ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಬನ್ನಂಜೆ ಎಸ್‌ಪಿ ಕಚೇರಿವರೆಗೆ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಏನಿದು ಕೇಸ್​..?

ಉಡುಪಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ಘಟನೆ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್​ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್​ಐಆರ್​ ಮಾಡಿದ್ದಾರೆ. ಜತೆಗೆ ಸೋಷಿಯಲ್​ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್​ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್​ ಹಾಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ.. ಬಿಜೆಪಿಯಿಂದ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

https://newsfirstlive.com/wp-content/uploads/2023/07/UDP_PROTEST.jpg

Load More