newsfirstkannada.com

ಅನಧಿಕೃತವಾಗಿ ಬ್ಯಾನರ್ ಅಳವಡಿಕೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ 50 ಸಾವಿರ ದಂಡ

Share :

22-08-2023

  50 ಸಾವಿರ ರೂಪಾಯಿ ದಂಡ ವಿಧಿಸಿದ ಬೆಂಗಳೂರು ಮಹಾನಗರ ಪಾಲಿಕೆ

  ಪರವಾನಿಗೆ ಪಡೆಯದೆ ಬ್ಯಾನರ್​ ಅಳವಡಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

  ಪಾಲಿಕೆಯ ಮುಖ್ಯ ಆಯುಕ್ತರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅನಧಿಕೃತವಾಗಿ ಬ್ಯಾನರ್ ಅಳವಡಿಕೆ ಮಾಡಿದ್ದಕ್ಕೆ ಬೆಂಗಳೂರು ಮಹಾನಗರ ಪಾಲಿಕೆ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ‌ವಂಗತ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ, ಬೆಂಗಳೂರಿನ ಕಾಂಗ್ರೆಸ್​ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸಿತ್ತು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರಿಗೆ ದಂಡ ಕಟ್ಟಲು ಹೇಳಿದೆ.

ಕಾಂಗ್ರೆಸ್​ ಪಕ್ಷ ಬ್ಯಾನರ್ ಅಳವಡಿಕೆಗೆ ಸಮಿತಿಯು ಪಾಲಿಕೆ ವತಿಯಿಂದ ಅಧಿಕೃತವಾಗಿ ಪರವಾನಿಗೆ ಪಡೆದಿರಲಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರಿಗೆ 50 ಸಾವಿರ ರೂಪಾಯಿ ದಂಡವನ್ನು ಬೆಂಗಳೂರು ಮಹಾ ನಗರ ಪಾಲಿಕೆ ವಿಧಿಸಿದೆ. ಪಾಲಿಕೆಯ ಮುಖ್ಯ ಆಯುಕ್ತರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚನೆ ನೀಡಿದೆ.

ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಸ್ವತ್ತಿನ ಸಂಖ್ಯೆ:12/1 ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬ್ಯಾನರ್​ ಅಳವಡಿಸಿತ್ತು. ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ಮತ್ತು ಮಾಜಿ ಪ್ರಧಾನಿ ಆಧುನಿಕ ಭಾರತದ ಹರಿಕಾರ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ‌. ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಅಂಗವಾಗಿ ಈ ಬ್ಯಾನರ್​ ಹಾಕಲಾಗಿತ್ತು. ಆದರೆ ಬ್ಯಾನರ್​ ಅಳವಡಿಕೆಗೆ ಅನುಮತಿ ತೆಗೆದುಕೊಂಡಿರಲಿಲ್ಲ. ಈ ಸಂಬಂಧ ಬಿಬಿಎಂಪಿ 50 ಸಾವಿರದಷ್ಟು ದಂಡ ಹಾಕಿದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನಧಿಕೃತವಾಗಿ ಬ್ಯಾನರ್ ಅಳವಡಿಕೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ 50 ಸಾವಿರ ದಂಡ

https://newsfirstlive.com/wp-content/uploads/2023/06/D-K-Shivakumar.jpg

Load More