newsfirstkannada.com

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

Share :

23-08-2023

    ಏಕಾಏಕಿ ಕುಸಿದ ನಿರ್ಮಾಣ ಹಂತದ ರೈಲ್ವೇ ಸೇತುವೆ

    35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು

    ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ

ನವದೆಹಲಿ: ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ ಘಟನೆ ವಿಜೋರಾಂನಲ್ಲಿ ನಡೆದಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಐಜ್ವಾಲ್​ನಿಂದ ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್​ ಪ್ರದೇಶದಲ್ಲಿ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಈ ಕೆಲಸದಲ್ಲಿ ಸುಮಾರು 35ರಿಂದ 40 ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮಾಡುವ ವೇಳೆ ಏಕಾಏಕಿ ಸೇತುವೆ ಕುಸಿದಿದೆ. ಉಳಿದ ಕಾರ್ಮಿಕರಿಗಾಗಿ ಶೋಧ ನಡೆಯುತ್ತಿದೆ.

ರೈಲ್ವೇ ಸೇತುವೆ ಕುಸಿದ ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ.

ಮಿಜೋರಾಂ ಮುಖ್ಯಮಂತ್ರಿ ಝೋರಂತರಂಗ ಟ್ವೀಟ್​​ ಮಾಡಿದ್ದು, “ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. ಕನಿಷ್ಠ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರ ದುಃಖ ಮತ್ತು ಬಾಧಿತವಾಗಿದೆ. ನಾನು ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆ ಹೇಳುತ್ತಿದ್ದೇನೆ” ಎಂದು ಟ್ವೀಟ್​ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು 17 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

https://newsfirstlive.com/wp-content/uploads/2023/08/Railway-Bridge.jpg

Load More