newsfirstkannada.com

WATCH: ಬೆಂಗಳೂರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಸರಳ ವಿವಾಹ

Share :

08-06-2023

  ನಿರ್ಮಲಾ ಸೀತಾರಾಮನ್ ಮಗಳ ಸರಳ ಕಲ್ಯಾಣ

  ಗಣ್ಯರು, VVIPಗಳಿಲ್ಲದೇ ನಡೆದ ವಿವಾಹ ಸಂಭ್ರಮ

  ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಗಳು ವಾಙ್ಮಯಿ ಮದುವೆ ಸರಳವಾಗಿ ನೆರವೇರಿದೆ. ಬೆಂಗಳೂರಿನ ಟ್ಯಾಮರಿಂಡ್ ಟ್ರೀನಲ್ಲಿ ನಡೆದ ಮದುವೆ ಸಂಭ್ರಮದಲ್ಲಿ ನಿರ್ಮಲಾ ಸೀತಾರಾಮನ್ ಸುಪುತ್ರಿ ವಾಙ್ಮಯಿ ಅವರು ಪ್ರತೀಕ್ ಅವರ ಬಾಳ ಸಂಗಾತಿಯಾಗಿದ್ದಾರೆ.

ಹೆಚ್ಚಿನ ಗಣ್ಯರು, ವಿವಿಐಪಿಗಳು ಇಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿಯ ವಿವಾಹ ಸದ್ದಿಲ್ಲದೇ ನಡೆದಿದೆ. ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ಅವರು ಪ್ರತೀಕ್ ಅವರನ್ನು ಸರಳ ವಿವಾಹದಲ್ಲಿ ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆ. ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಶ್ರೀ ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿದರು. ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಮಾನ್ಯ ಶ್ರೀಮತಿ ನಿರ್ಮಲ ಸೀತಾರಾಮನ್ ಅವರಿಗೆ ನೀಡಲಾಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

WATCH: ಬೆಂಗಳೂರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಸರಳ ವಿವಾಹ

https://newsfirstlive.com/wp-content/uploads/2023/06/Niramala-Sitaraman.jpg

Load More