/newsfirstlive-kannada/media/post_attachments/wp-content/uploads/2024/01/Amith-Sha-BSY.jpg)
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ನಡೆದು 11 ಮಂದಿ RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: ಕಾಲ್ತುಳಿತ ಪ್ರಕರಣದಲ್ಲಿ ವಿರಾಟ್ ಕೊಹ್ಲಿಗೂ ಸಂಕಷ್ಟ.. ದಾಖಲಾಯ್ತು ಕೇಸ್..!
ನಾಡಿದ್ದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ ನಿಶ್ಚಯವಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ, ನಾಡಿದ್ದು ಬೆಳಗ್ಗೆ ನಡೆಯುವ ಮದುವೆ ಮುಹೂರ್ತದಲ್ಲಿ ಭಾಗಿಯಾಗಲಿದ್ದಾರೆ.
/newsfirstlive-kannada/media/post_attachments/wp-content/uploads/2024/01/Amith-Sha-BSY-1.jpg)
ಭಾನುವಾರ ಮಧ್ಯಾಹ್ನದವರೆಗೂ ಬೆಂಗಳೂರಿನಲ್ಲೇ ಬೀಡು ಬಿಡಲಿರುವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಕರೆದು ಮಾತುಕತೆ ನಡೆಸಲಿದ್ದಾರೆ. ಇದರ ಜೊತೆಗೆ ಭಾನುವಾರವೇ ಕಾಲ್ತುಳಿತ ನಡೆದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us