ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಗೆ ಅನಾರೋಗ್ಯ.. ದೆಹಲಿ ಪ್ರವಾಸ ದಿಢೀರ್ ರದ್ದು

author-image
admin
Updated On
ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಗೆ ಅನಾರೋಗ್ಯ.. ದೆಹಲಿ ಪ್ರವಾಸ ದಿಢೀರ್ ರದ್ದು
Advertisment
  • ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕುಮಾರಸ್ವಾಮಿ
  • ಚೆನ್ನೈ ಅಪೋಲೋ ಆಸ್ಪತ್ರೆಗೆ ಹೋಗಿ ಬಂದಿರುವ ಕೇಂದ್ರ ಸಚಿವ
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಗೈರು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಬೇಕಿದ್ದ ಪ್ರವಾಸ ದಿಢೀರ್ ರದ್ದಾಗಿದೆ. ಇಂದಿನಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಿದ್ದು, ಹೆಚ್‌.ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಬೇಕಿತ್ತು.

ಹೆಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ. ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 3-4 ದಿನಗಳಿಂದ ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

publive-image

ಇದನ್ನೂ ಓದಿ: ನಟಿ ರನ್ಯಾ ರಾವ್‌ ಸ್ಮಗ್ಲಿಂಗ್​ ಕೇಸ್‌ಗೆ ಬಿಗ್​ ಟ್ವಿಸ್ಟ್​​; ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್‌! 

ಕೇಂದ್ರ ಸಚಿವ ಹೆಚ್‌ಡಿಕೆ ಇತ್ತೀಚೆಗೆ ಚೆನ್ನೈ ಅಪೋಲೋ ಆಸ್ಪತ್ರೆಗೂ ತೆರಳಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೂ ಕಫ, ಕೆಮ್ಮು ಕಡಿಮೆಯಾಗದ ಹಿನ್ನೆಲೆಯಲ್ಲಿ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ.

ಮೊನ್ನೆ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರು ಗೈರಾಗಿದ್ದರು. ಇಂದು ದೆಹಲಿಗೆ ತೆರಳಬೇಕಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಾಳೆ ಪ್ರಯಾಣಿಸುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment