ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಡೀಪ್ ಫೇಕ್ ವಿಡಿಯೋ ಹಾವಳಿ
ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!
ಡೀಪ್ ಫೇಕ್ ವಿಡಿಯೋ ಮಾಡುವವರ ವಿರುದ್ಧ ಕಠಿಣ ಕ್ರಮ!
ಡೀಪ್ ಫೇಕ್ ವಿಡಿಯೋಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿಯ ವಿಡಿಯೋಗಳನ್ನು ನೋಡಿದ ಅದೆಷ್ಟೋ ಜನರು ಭಾರೀ ವಿರೋಧವೂ ವ್ಯಕ್ತಪಡಿಸಿದ್ದಾರೆ. ಮೊದಲು ನಟಿ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಬಳಸಿ ಮಾಡಲಾದ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಕೆಲ ಕಿಡಿಗೇಡಿಗಳು ಡೀಪ್ ಫೇಕ್ ವಿಡಿಯೋಗಳನ್ನು ಮಾಡುತ್ತಾ ಇದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಬಳಿಕ ಬಾಲಿವುಡ್ ಬ್ಯೂಟಿ ಕತ್ರೀನಾ ಕೈಫ್ ಅವರ ವಿಡಿಯೋವನ್ನು ಕೂಡ ಫೇಕ್ ಮಾಡಿದ್ದರು. ಅಷ್ಟೇ ಯಾಕೆ ಈ ಎಲ್ಲದರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಡೀಪ್ ಫೇಕ್ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. AI ಟೆಕ್ನಾಲಜಿ ಬಳಸಿ ಮೋದಿಯವರ ಗರ್ಭಾ ನೃತ್ಯ ಮಾಡುತ್ತಿರೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿತ್ತು. ಈ ಬಗ್ಗೆ ಪ್ರಧಾನಿ ಮೋದಿ ಅವರು ಇದು ದೇಶಕ್ಕೆ ಎದುರಾಗಲಿರುವ ಬಹುದೊಡ್ಡ ಬೆದರಿಕೆ ಅಂತಾ ಕಳವಳ ವ್ಯಕ್ತಪಡಿಸಿದ್ದರು.
ಇದೀದ ಡೀಪ್ ಫೇಕ್‌ಗಳ ಹೆಚ್ಚುತ್ತಿರುವ ಕಾರಣ ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಇತ್ತೀಚೆಗೆ ಎಲ್ಲಾ ದೊಡ್ಡ ಸಾಮಾಜಿಕ ಮಾಧ್ಯಮ ಫಾರ್ಮ್‌ಗಳಿಗೆ ನೋಟಿಸ್‌ಗಳನ್ನು ನೀಡಿದ್ದೇವೆ. ಡೀಪ್‌ಫೇಕ್‌ಗಳನ್ನು ಗುರುತಿಸಲು, ಆ ವಿಷಯವನ್ನು ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಳ್ಳುತ್ತೇವೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ಪ್ರತಿಕ್ರಿಯಿಸಿವೆ. ಅವರು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ಕೆಲಸದಲ್ಲಿ ಹೆಚ್ಚು ಗಮನಹರಿಸಲು ನಾವು ಅವರಿಗೆ ತಿಳಿಸಿದ್ದೇವೆ ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ