/newsfirstlive-kannada/media/post_attachments/wp-content/uploads/2024/07/Income-Tax.jpg)
ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಆದಾಯ ತೆರಿಗೆ ಬಹುಮುಖ್ಯವಾದ ಭಾಗವಾಗಿದ್ದು, ಮೋದಿ ಸರ್ಕಾರದ ಮೇಲೆ ಇಡೀ ದೇಶವೇ ಕಣ್ಣಿಟ್ಟಿತ್ತು. ನಿರೀಕ್ಷೆಯಂತೆ ಕೇಂದ್ರ ಬಜೆಟ್‌ನಲ್ಲಿ ದೇಶದ ಮಧ್ಯಮ ವರ್ಗದ ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.
ದೇಶದ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಹತ್ವದ ರಿಲೀಫ್ ನೀಡುವ ನಿರೀಕ್ಷೆ ಇತ್ತು. ಆದರೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆದಾರರಿಗೆ ಬಿಗ್ ಸರ್‌ಪ್ರೈಸ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಬಜೆಟ್ ಆರಂಭದಲ್ಲೇ ಕೃಷಿಗೆ ಕೊಡುಗೆ.. ‘ಪಿಎಂ ಧನ ಧಾನ್ಯ ಕೃಷಿ ಯೋಜನೆ’ ಘೋಷಣೆ
2025ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸದ್ಯಕ್ಕೆ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆಯನ್ನು ಘೋಷಣೆ ಮಾಡಿಲ್ಲ. ಇನ್‌ಕಂ ಟ್ಯಾಕ್ಸ್ ಬಗ್ಗೆ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ಅವರು ಮುಂದಿನ ವಾರ ಹೊಸ ಆದಾಯ ತೆರಿಗೆ ಬಿಲ್ ಮಂಡಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ವಾರ ಹೊಸ ಇನ್‌ಕಂ ಟ್ಯಾಕ್ಸ್ ಬಿಲ್ ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದಿರುವ ಕೇಂದ್ರ ಸರ್ಕಾರ ಆದಾಯ ತೆರಿಗೆದಾರರಿಗೆ ಸರ್‌ಪ್ರೈಸ್ ಕೊಟ್ಟಿದೆ. ಸದ್ಯ ಮಧ್ಯಮ ವರ್ಗದ ದೇಶವಾಸಿಗಳು, ವೇತನದಾರರು, ಉದ್ಯೋಗಿಗಳು ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಏನೆಲ್ಲಾ ಇರಲಿದೆ ಅನ್ನೋ ಕುತೂಹಲ ಕೆರಳುವಂತೆ ಮಾಡಿದೆ. ಆದಾಯ ತೆರಿಗೆದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2025ನೇ ಹಣಕಾಸು ವರ್ಷದಲ್ಲಿ ₹12 ಲಕ್ಷದವರೆಗೆ ಟ್ಯಾಕ್ಸ್ ಕಟ್ಟುವಂತಿಲ್ಲ ಅನ್ನೋ ಮಹತ್ವದ ಘೋಷಣೆಯನ್ನು ಮೋದಿ ಸರ್ಕಾರ ಮಾಡಿದೆ.
ಹೊಸ ಆದಾಯ ತೆರಿಗೆ ಬಿಲ್!
ಸದ್ಯಕ್ಕೆ ಮುಂದಿನ ವಾರ ಹೊಸ ಆದಾಯ ತೆರಿಗೆ ಬಿಲ್ ಮಂಡಿಸುವುದಾಗಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಿಗಳ ಆದಾಯ ತೆರಿಗೆ ಮಿತಿ ಹೆಚ್ಚಳ ಮಾಡಲಾಗುತ್ತಿದ್ದು, TCS 7 ಲಕ್ಷದಿಂದ 10 ಲಕ್ಷಕ್ಕೆ ಆದಾಯ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ. ಹಿರಿಯ ನಾಗರಿಕರಿಗೆ 50,000 ದಿಂದ 1 ಲಕ್ಷಕ್ಕೆ ಆದಾಯ ತೆರಿಗೆ ವಿನಾಯತಿ ನೀಡಲಾಗುತ್ತಿದೆ. ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಇನ್‌ಕಂ ಟ್ಯಾಕ್ಸ್ ರಿಟರ್ನ್ಸ್ ಮಾಡುವ ವಿಧಾನವನ್ನು ಸರಳೀಕರಿಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ