/newsfirstlive-kannada/media/post_attachments/wp-content/uploads/2025/01/Yogi-Adityanath.jpg)
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ವಿಶ್ವ ಪ್ರಸಿದ್ಧ ಸನಾತನ ಧರ್ಮದ ಮಹಾಕುಂಭಮೇಳ 9ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೂ 9 ಕೋಟಿಗೂ ಹೆಚ್ಚು ಮಂದಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 29ರ ಮೌನಿ ಅಮಾವಾಸ್ಯೆಯಂದು ಒಂದೇ ದಿನ 8-9 ಕೋಟಿ ಭಕ್ತರು ಪ್ರಯಾಗ್‌ರಾಜ್‌ಗೆ ಆಗಮಿಸುವ ನಿರೀಕ್ಷೆ ಇದೆ.
ದಿನದಿಂದ ದಿನಕ್ಕೆ ಕೋಟ್ಯಾಂತರ ಭಕ್ತರು ಪ್ರಯಾಗ್ ರಾಜ್‌ಗೆ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಮಹಾಕುಂಭಮೇಳದ ಈ ಐತಿಹಾಸಿಕ ಸಂದರ್ಭದಲ್ಲಿ ಐತಿಹಾಸಿಕ ನಿರ್ಧಾರಗಳನ್ನು ಘೋಷಿಸಲು ನಿರ್ಧರಿಸಿದ್ದಾರೆ.
ಇಂದು ಪ್ರಯಾಗರಾಜ್‌ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ವಿಶೇಷ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ. ಪ್ರಮುಖವಾಗಿ ಈ ಕ್ಯಾಬಿನೆಟ್ ಸಭೆಯಲ್ಲಿ ಪ್ರಯಾಗರಾಜ್, ವಾರಾಣಾಸಿ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ರಚನೆ, ಪ್ರಯಾಗರಾಜ್‌ನಲ್ಲಿ ಗಂಗಾ ನದಿಗೆ ಅಡ್ಡಲಾಗಿ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಮಹಾಕುಂಭಮೇಳದ ಮೊನಾಲಿಸಾಗೆ ಬಾಲಿವುಡ್ ಆಫರ್.. ನೀಲಿ ಕಣ್ಗಳ ಚೆಲುವೆಗೆ ಒಲಿದ ಅದೃಷ್ಟ!
ಇಂದು ಪ್ರಯಾಗರಾಜ್‌ನ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ನಲ್ಲಿ ನಡೆಯುವ ಕ್ಯಾಬಿನೆಟ್ ಸಭೆ ಇಡೀ ದೇಶದ ಗಮನ ಸೆಳೆದಿದೆ. ಈ ಸಭೆಯ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಯಾಗ್‌ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಸಿಎಂ ಜೊತೆ ಕ್ಯಾಬಿನೆಟ್ ಸಚಿವರು ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಕ್ಯಾಬಿನೆಟ್ ಸಭೆ ಹಾಗೂ ಸಿಎಂ ಪುಣ್ಯಸ್ನಾನದ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ಜೋರಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ