ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತ ಅರೆಸ್ಟ್
ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸೂಚಿಸಿದ ಸಿಎಂ ಚೌಹಾಣ್
ಪರ್ವೇಶ್ ಶುಕ್ಲಾ ದುರ್ವತನೆಗೆ ದೇಶಾದ್ಯಂತ ವ್ಯಾಪಕ ಖಂಡನೆ
ಆದಿವಾಸಿ ವ್ಯಕ್ತಿಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಮೂತ್ರ ವಿಸರ್ಜನೆ ಮಾಡಿದ ವಿಲಕ್ಷಣ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮೂತ್ರ ವಿಸರ್ಜನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರ್ವೇಶ್ ಶುಕ್ಲಾ ಎಂಬ ಕಿಡಿಗೇಡಿಯೊಬ್ಬ ದಶ್ಮತ್ ರಾವತ್ ಎಂಬ ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದಂತೆ ರಾಜಕೀಯ ಸ್ವರೂಪ ಕೂಡ ಪಡೆದುಕೊಂಡಿದೆ.
ಇದನ್ನು ಓದಿ: ಥೂ ಅನಿಷ್ಟ.. ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ದುರಂಹಕಾರಿ..!
ಈ ಘಟನೆ ನಡೆದ ಆರು ದಿನಗಳ ಬಳಿಕ ಆರೋಪಿ ಪರ್ವೇಶ್ ಶುಕ್ಲಾನನ್ನು ಮಧ್ಯಪ್ರದೇಶ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. SC/ST ಕಾಯಿದೆಯ ಅಡಿಯಲ್ಲಿ ಪರ್ವೇಶ್ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಬಹ್ರಿ ಪೊಲೀಸ್ ಠಾಣೆಯ ಉಸ್ತುವಾರಿ ಪವನ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇನ್ನು, ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ನಾನು ಸೂಚನೆ ನೀಡಿದ್ದೇನೆ, ಇದು ಎಲ್ಲರಿಗೂ ನೈತಿಕ ಪಾಠವಾಗಬೇಕು, ನಾವು ಅವನನ್ನು ಬಿಡುವುದಿಲ್ಲ, ಆರೋಪಿಗೆ ಧರ್ಮ, ಜಾತಿ ಅಥವಾ ಪಕ್ಷವಿಲ್ಲ ಎಂದು ಹೇಳಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಭಾರೀ ಆಕ್ರೋಶಗಳನ್ನು ಹೊರ ಹಾಕಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ಎಂತಹ ಪಕ್ಷ ಎಂದು ನೀವು ನೋಡಬಹುದು. ಅವರು ಆದಿವಾಸಿಗಳನ್ನು ಗೌರವಿಸುವುದಿಲ್ಲ, ಅಲ್ಪಸಂಖ್ಯಾತರ ಮೇಲೆ ಹಲ್ಲೆ ಮಾಡುವುದು ಮಾತ್ರ ತಿಳಿದಿದೆ. ಇಂತಹ ನೂರಾರು ಘಟನೆಗಳು ಬೆಳಕಿಗೆ ಬರುವುದಿಲ್ಲ ಎಂದು ಕಾಮೆಂಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ