ಇನ್ಮುಂದೆ ಬೆಂಗಳೂರಿನಲ್ಲೇ ಸಿಗಲಿದೆ ಅಮೆರಿಕ ವೀಸಾ
ಮೋದಿ US ಭೇಟಿ ಬೆನ್ನಲ್ಲೇ ಕನ್ನಡಿಗರಿಗೆ ಗುಡ್ನ್ಯೂಸ್
ಹೊಸ ರಾಯಭಾರ ಕಚೇರಿ ತೆರೆಯಲು ಅಮೆರಿಕ ಚಿಂತನೆ
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಭೇಟಿ ಬೆನ್ನಲ್ಲೇ ಕನ್ನಡಿಗರಿಗೆ ಗುಡ್ನ್ಯೂಸ್ ಸಿಕ್ಕಿದೆ. ಇದುವರೆಗೂ ಕನ್ನಡಿಗರು ಅಮೆರಿಕದ ವೀಸಾಗಾಗಿ ಚೆನ್ನೈ ಅಥವಾ ಹೈದರಾಬಾದ್ಗೆ ಹೋಗಬೇಕಿತ್ತು. ಇಲ್ಲದೆ ಹೋದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರೋ ರಾಯಭಾರ ಕಚೇರಿಗೆ ಭೇಟಿ ಕೊಡಬೇಕಿತ್ತು. ಇನ್ಮುಂದೆ ಬೆಂಗಳೂರಿನಲ್ಲೇ ಕನ್ನಡಿಗೆ ಅಮೆರಿಕ ವೀಸಾ ಸಿಗಲಿದೆ.
ಯೆಸ್, ಬೆಂಗಳೂರು ಹಾಗೂ ಅಹಮದಾಬಾದ್‌ನಲ್ಲಿ ತನ್ನ ರಾಯಭಾರ ಕಚೇರಿ ತೆರೆಯಲು ಅಮೆರಿಕ ಚಿಂತಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಳಿ ಖುದ್ದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಸ್ತಾಪ ಮಾಡಿರುವುದಾಗಿ ವರದಿಯಾಗಿದೆ.
ಭಾರತದಲ್ಲಿ 2 ಹೊಸ ರಾಯಭಾರ ಕಚೇರಿಗಳನ್ನು ತೆರೆಯಲು ಉದ್ದೇಶಿಸಿದ್ದೇವೆ. ಅದು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ತೆರೆಯಲಿದ್ದು, ಇದು ಭಾರತದೊಂದಿಗೆ ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ