/newsfirstlive-kannada/media/post_attachments/wp-content/uploads/2025/05/Rubio.jpg)
ಭಾರತದೊಳಗಿನ ಅನೇಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಪಿ ಪಾಕಿಸ್ತಾನ ದಾಳಿ ಮಾಡುತ್ತಿದೆ. ಇಂದು ಮುಂಜಾನೆ ಮತ್ತೆ ತನ್ನ ದಾಳಿಯನ್ನು ಮುಂದುವರೆಸಿದ್ದು, ಈ ಬಗ್ಗೆ ಸೇನೆ ಅಧಿಕೃತ ಮಾಹಿತಿ ನೀಡಿದೆ.
ಇದನ್ನೂ ಓದಿ: ಕರಾಚಿ ಮೇಲೆ ಭಾರತ ಕ್ಷಿಪಣಿ, ಡ್ರೋಣ್ ಅಟ್ಯಾಕ್.. ಖತಂ ಆಗ್ತಾನಾ ದಾವೂದ್ ಇಬ್ರಾಹಿಂ..?
/newsfirstlive-kannada/media/post_attachments/wp-content/uploads/2025/05/JAMMU-3.jpg)
ಈ ದಾಳಿ ನಡುವೆಯೇ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಹಾಗೂ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ಆಂಟೋನಿಯೊ ರೂಬಿಯೊ ಮಾತುಕತೆ ನಡೆಸಿದ್ದಾರೆ. ಭವಿಷ್ಯದ ಸಂಘರ್ಷಗಳನ್ನು ತಪ್ಪಿಸಲು ರಚನಾತ್ಮಕ ಮಾತುಕತೆಗಳನ್ನು ಪ್ರಾರಂಭಿಸಲು ಉಭಯ ದೇಶಗಳು ಮಾರ್ಗಗಳನ್ನು ಕಂಡುಕೊಳ್ಳುವಂತೆ ರುಬಿಯೊ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
/newsfirstlive-kannada/media/post_attachments/wp-content/uploads/2025/05/PAK-PM.jpg)
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ ಮಾತನಾಡಿ, ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಇಸ್ಲಾಮಾಬಾದ್ ಹಾಗೂ ನವದೆಹಲಿ ಎರಡು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಅಗತ್ಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಹಾಗೂ ಭವಿಷ್ಯದ ಸಂಘರ್ಷಗಳನ್ನು ತಪ್ಪಿಸಲು ರಚನಾತ್ಮಕ ಮಾತುಕತೆಗಳನ್ನು ಪ್ರಾರಂಭಿಸಲು ಎರಡು ದೇಶಗಳ ನಾಯಕರಿಗೆ ರುಬಿಯೊ ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us