newsfirstkannada.com

‘ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ’ ನರಕಕ್ಕೆ ಹೋಗಲಿ ಎಂದ ಮುಸ್ಲಿಂ ಧಾರ್ಮಿಕ ಮುಖಂಡನಿಗೆ ಖಾದರ್ ತಿರುಗೇಟು

Share :

Published February 5, 2024 at 2:42pm

  ಹರಕೆ ‌ಕೋಲದಲ್ಲಿ ಭಾಗಿಯಾದ ಸ್ಪೀಕರ್ ಯುಟಿ ಖಾದರ್

  ಗೌರವ ಕೊಡುವುದು ನಮ್ಮ ಸಂಸ್ಕೃತಿ ಎಂದ ಯುಟಿ ಖಾದರ್​

  ಸಾಲೆತ್ತೂರು ಫೈಝಿಗೆ ತುರುಗೇಟು ಕೊಟ್ಟ ಯುಟಿ ಖಾದರ್​

ಹರಕೆ ‌ಕೋಲದಲ್ಲಿ ಭಾಗಿಯಾದ ಸ್ಪೀಕರ್ ಯುಟಿ ಖಾದರ್​ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಬರೆದು ಹಾಕಿದ್ದರು. ಆದರೀಗ ಈ ವಿಚಾರವಾಗಿ ವಿಧಾನಸಭಾ ಅಧ್ಯಕ್ಷ ಸ್ಪಷ್ಟಣೆ ಕೊಟ್ಟಿದ್ದಾರೆ.

ಯು. ಟಿ ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೀಚುವವರನ್ನು ಇತಿಹಾಸ ನೆನಪಿಟ್ಟುಕೊಳ್ಳಲ್ಲ. ಪ್ರಶ್ನೆ ಕೇಳುವವರನ್ನ ಇತಿಹಾಸ ನೆನಪಿಗೆ ಇಟ್ಟುಕೊಳ್ಳಲ್ಲ. ಯಾರು ಕೆಲ್ಸ ಮಾಡ್ತಾರೆ, ಯಾರು ಉತ್ತರ ಕೊಡ್ತಾರೆ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳುತ್ತೆ. ನಮ್ಮ ಪ್ರಾಚೀನ ಆಚರಣೆ ಅನುಗುಣವಾಗಿ ಅವರು ಹರಕೆ ಇಟ್ಟುಕೊಂಡಿದ್ರು. ಅದಕ್ಕೆ ಹೋಗುವುದು, ಗೌರವ ಕೊಡುವುದು ನಮ್ಮ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು ಎಂಂದು ಹೇಳಿದ್ದಾರೆ.

ಯುಟಿ ಖಾದರ್​ ವಿರುದ್ಧ ಇರುವ ಆಕ್ಷೇಪವೇನು? 

ಯುಟಿ ಖಾದರ್​ ಶ್ರೀ ಕ್ಷೇತ್ರ ಪಣೋಲಿ ಬೈಲ್​ಗೆ ಭೇಟಿ ನೀಡಿ ಹರಕೆ ಕೋಲ ನೆರವೇರಿಸಿದ್ದರು. ಇದನ್ನು ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಅದರಲ್ಲಿ  ‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ’ ಎಂದು ಬರೆದುಕೊಂಡಿದ್ದಾರೆ.

ನಂತರ ‘ಖಾದರ್ ಕೊರಗಜ್ಜನಿಗೂ, ಕಲ್ಲುರ್ಟಿ,ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವತಂತ್ರ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ’ ನರಕಕ್ಕೆ ಹೋಗಲಿ ಎಂದ ಮುಸ್ಲಿಂ ಧಾರ್ಮಿಕ ಮುಖಂಡನಿಗೆ ಖಾದರ್ ತಿರುಗೇಟು

https://newsfirstlive.com/wp-content/uploads/2024/02/UT-Khader-2.jpg

Load More