ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗಕ್ಕೂ ಹಾನಿ
ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕಿ ಬರಲಿಲ್ಲ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಶುರು
ಉತ್ತರ ಪ್ರದೇಶದ ಹರ್ದೋಯಿನಲ್ಲಿ ಮರವೊಂದಕ್ಕೆ ವಾಹನ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 4 ವರ್ಷದ ಮಗು ಕೂಡ ಮೃತಪಟ್ಟಿದೆ.
ನಿನ್ನೆ ಸಂಜೆ ಬಿಲ್ಹುರ್-ಕತ್ರಾ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿ.. ರಸ್ತೆ ಅಪಘಾತದಲ್ಲಿ ನಾಲ್ವರು ವಯಸ್ಕರು ಹಾಗೂ ನಾಲ್ಕು ವರ್ಷದ ಒಂದು ಮಗು ಮೃತಪಟ್ಟಿದೆ. ಇವರು ನಯಾಗಾಂವ್ನ ಬರಕನಾಥ ಗ್ರಾಮದ ನಿವಾಸಿಗಳಾಗಿದ್ದರು.
ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಮೃತಪಟ್ಟಿದ್ದಾರೆಂದು ದೃಢಪಡಿಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ