newsfirstkannada.com

BIG BREAKING: ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ?

Share :

Published May 30, 2024 at 5:29pm

Update May 30, 2024 at 5:30pm

    ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ರಾಜೀನಾಮೆ ನೀಡದಿದ್ದರೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮುಜುಗರ

    ವಾಲ್ಮೀಕಿ ನಿಗಮದ ಹಗರಣದ ತನಿಖೆ ಪೂರ್ಣ ಆಗುವವರೆಗೂ ತಲೆದಂಡ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗುವ ನಿರೀಕ್ಷೆ ಇದ್ದು, ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ಡೆತ್‌ನೋಟ್ ಬರೆದಿಟ್ಟು ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಡ ಹಾಕಲಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ನೌಕರನ ಆತ್ಮಹತ್ಯೆ.. ಡೆತ್‌ನೋಟ್‌ನಲ್ಲಿ ಕೋಟಿ, ಕೋಟಿ ಹಗರಣದ ರಹಸ್ಯ ಬಯಲು 

ವಾಲ್ಮೀಕಿ ನಿಗಮದ ಹಗರಣದ ತನಿಖೆ ಪೂರ್ಣ ಆಗುವವರೆಗೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ನ್ಯೂಸ್ ಫಸ್ಟ್ ಸರ್ಕಾರದ ಮೂಲಗಳಿಂದ ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ.

ಸಚಿವ ಬಿ. ನಾಗೇಂದ್ರ ಅವರು ಇಂದು ರಾತ್ರಿ ವೇಳೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಎಸ್‌ಟಿ ನಿಗಮದ ಅಧಿಕಾರಿಯ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BIG BREAKING: ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ?

https://newsfirstlive.com/wp-content/uploads/2024/05/Minister-B-Nagendra-1.jpg

Load More