newsfirstkannada.com

BREAKING: ವಾಲ್ಮೀಕಿ ನಿಗಮದ ಹಗರಣಕ್ಕೆ ಹೊಸ ಟ್ವಿಸ್ಟ್.. ಇಬ್ಬರು ಹಿರಿಯ ಅಧಿಕಾರಿಗಳು ಅರೆಸ್ಟ್!

Share :

Published June 1, 2024 at 10:40am

Update June 1, 2024 at 10:59am

    ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ. ಹಗರಣ ಆರೋಪ

    ಹಗರಣ ಬೆಳಕಿಗೆ ಬಂದ ಬಳಿಕ ಎಸ್ಕೇಪ್ ಆಗಿದ್ದ ಹಿರಿಯ ಅಧಿಕಾರಿಗಳು

    ವಾಲ್ಮೀಕಿ ನಿಗಮದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಹಿರಿಯ ಅಧಿಕಾರಿಗಳು ಅರೆಸ್ಟ್‌

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂಪಾಯಿ ಹಗರಣದ ತನಿಖೆ ಜೋರಾಗಿದೆ. ಎಸ್‌ಐಟಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸಿಹಿ ಸುದ್ದಿ ಕೊಟ್ಟ ಗೊಂಬೆ.. ಸಂಭ್ರಮದಲ್ಲಿ ನೇಹಾ-ಚಂದನ್​.. ಅಭಿಮಾನಿಗಳಿಂದ ಶುಭ ಹಾರೈಕೆ

ವಾಲ್ಮೀಕಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರ್ ಅವರು ಬರೆದಿದ್ದ ಡೆತ್‌ನೋಟ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕೃತ ಬ್ಯಾಂಕ್​ ಖಾತೆಯಿಂದ ಆರ್‌ಬಿಎಲ್‌ ಬ್ಯಾಂಕ್‌ನಲ್ಲಿರೋ ಹತ್ತು ಖಾಸಗಿ ಕಂಪನಿಗಳು ಮತ್ತು ಎಂಟು ವ್ಯಕ್ತಿಗಳ ಖಾತೆಗಳಿಗೆ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ನೌಕರನ ಆತ್ಮಹತ್ಯೆ.. ಡೆತ್‌ನೋಟ್‌ನಲ್ಲಿ ಕೋಟಿ, ಕೋಟಿ ಹಗರಣದ ರಹಸ್ಯ ಬಯಲು

ಈ ಹಗರಣ ಬೆಳಕಿಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಅಧಿಕಾರಿಗಳು ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಇಬ್ಬರನ್ನೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿತ ಅಧಿಕಾರಿಗಳು. ಹಿರಿಯ ಅಧಿಕಾರಿಗಳನ್ನು ಬಂಧಿಸಿರುವ ಎಸ್‌ಐಟಿ ತನಿಖಾ ತಂಡ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಬೆಂಗಳೂರು ಹೊರವಲಯದಲ್ಲಿ ನಿನ್ನೆ ರಾತ್ರಿಯೇ ಇಬ್ಬರನ್ನೂ ಎಸ್‌ಐಟಿ ಬಂಧಿಸಲಾಗಿದ್ದು, ಇಂದು ಮಧ್ಯಾಹ್ನ ಕೋರ್ಟ್‌ಗೆ ಹಾಜರುಪಡಿಸಲಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಹಿರಿಯ ಅಧಿಕಾರಿಗಳನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ವಾಲ್ಮೀಕಿ ನಿಗಮದ ಹಗರಣಕ್ಕೆ ಹೊಸ ಟ್ವಿಸ್ಟ್.. ಇಬ್ಬರು ಹಿರಿಯ ಅಧಿಕಾರಿಗಳು ಅರೆಸ್ಟ್!

https://newsfirstlive.com/wp-content/uploads/2024/06/valmiki-case.jpg

Load More