ಚಿನ್ನದ ಪಲ್ಲಕ್ಕಿಯಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ; ಈ ವರ್ಧಂತಿ ಮಹೋತ್ಸವದ ವಿಶೇಷ ಏನು?

author-image
admin
Updated On
ಚಿನ್ನದ ಪಲ್ಲಕ್ಕಿಯಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ; ಈ ವರ್ಧಂತಿ ಮಹೋತ್ಸವದ ವಿಶೇಷ ಏನು?
Advertisment
  • ನಾಡದೇವತೆಗೆ ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ
  • ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಚಾಲನೆ
  • ದರ್ಬಾರ್ ಮಾದರಿಯಲ್ಲೇ ತಾಯಿ ಚಾಮುಂಡೇಶ್ವರಿಗೆ ದರ್ಬಾರ್ ಉತ್ಸವ

ಮೈಸೂರಲ್ಲಿ ಐತಿಹಾಸಿಕ ವರ್ಧಂತಿ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ. ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ, ಸಡಗರ ಮನೆ ಮಾಡಿದ್ದು, ಬೆಳಗ್ಗೆಯಿಂದಲೇ ನಾಡ ದೇವತೆಯ ದರ್ಶನಕ್ಕೆ ಅಪಾರ ಭಕ್ತ ಸಾಗರ ಹರಿದು ಬರುತ್ತಿದೆ.

ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡೇಶ್ವರಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದಿದೆ. ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ, ಕುಂಕುಮರ್ಚನೆ ನೆರವೇರಿಸಲಾಗಿದೆ. ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಗರ್ಭಗುಡಿಯನ್ನು ಅಲಂಕಾರ ಮಾಡಲಾಗಿದೆ.

publive-image

ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಚಾಲನೆ ನೀಡಿದರು. ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, ಶಾಸಕ ಜಿ.ಟಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ:ಅಬ್ಬಬ್ಬಾ! ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ? ಸ್ಟೋರಿ ಓದಿದ್ರೆ ಶಾಕ್​ ಆಗ್ತೀರಾ..! 

ಬೆಳಗ್ಗೆ 8.30ಕ್ಕೆ ಪಲ್ಲಕ್ಕಿ ಉತ್ಸವ ನಡೆದಿದ್ದು, ಮಹಾರಾಜ ಯದುವೀರ ಒಡೆಯರ್‌ ಚಾಲನೆ ನೀಡಿದ್ದಾರೆ. ಸಂಜೆಯ ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದು ಸಂಜೆ 8ಗಂಟೆಯ ನಂತರ ದರ್ಬಾರ್ ಉತ್ಸವ ನಡೆಯಲಿದೆ. ಮೈಸೂರು ಅರಮನೆಯಲ್ಲಿ ನಡೆಯುವ ದರ್ಬಾರ್ ಮಾದರಿಯಲ್ಲೇ ಅಮ್ಮನವರಿಗೆ ದರ್ಬಾರ್ ಉತ್ಸವ ಮಾಡಲಾಗುತ್ತದೆ.

ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್ ಅವರು ಈ ಬಾರಿ ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ನಾಡಿನ ಎಲ್ಲಾ ಜನತೆಗೂ ಚಾಮುಂಡೇಶ್ವರಿ ತಾಯಿ ಒಳಿತು ಮಾಡಲಿ. ವರ್ಧಂತಿ ದಿನ ಅಮ್ಮನವರಿಗೆ ನಮಸ್ಕರಿಸಿ ಭಕ್ತರು ಆಶೀರ್ವಾದ ಪಡೆಯುತ್ತಾರೆ ಎಂದು ಹೇಳಿದ್ದಾರೆ.

publive-image

ಪ್ರಮೋದಾ ದೇವಿ ಹೇಳಿದ್ದೇನು?
ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿದರು. ಈ ಬಾರಿ ತಾಯಿ ಚಾಮುಂಡೇಶ್ವರಿಗೆ ಸೀರೆ ಕೊಟ್ಟ ವಿಚಾರದಲ್ಲಿ ನನ್ನದೇನು ಇಲ್ಲ. ಎಲ್ಲಾ ದೇವಿಯ ಅನುಗ್ರಹ. ಕಳೆದ ಬಾರಿ ಕೊಡಬೇಕೆಂದು ಅಂದುಕೊಂಡಿದ್ದೆ ಕೊಡಲು ಸಾಧ್ಯವಾಗಿರಲಿಲ್ಲ. ಈ ಬಾರಿ ಪ್ರತಿ ವರ್ಷದಂತೆ ಮೂಲ ಮೂರ್ತಿ, ಉತ್ಸವಮೂರ್ತಿ ಎರಡಕ್ಕೂ ನೀಡಿದ್ದೇನೆ. ನಾಡಿನ ಜನತೆಗೆ ಒಳಿತಾಗಲಿ ಎಂದು ಸಂಕಲ್ಪ ಮಾಡಿದ್ದೇವೆ. ಅತಿವೃಷ್ಠಿಯು ಬೇಡ, ಅನವೃಷ್ಟಿಯೂ ಬೇಡ. ಸಮವೃಷ್ಟಿಯಲ್ಲಿ ಮಳೆ ಆಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಯದುವೀರ್ ಅವರು ದೇವರ ಮುಂದೆ ಸಂಸದರಲ್ಲ, ಸದಾ ಮಗನಾಗಿ ಇರುತ್ತಾರೆ. ವರ್ಧಂತಿ ಮಹೋತ್ಸವ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿರುವ ಆಚರಣೆ ಮುಂದುರೆಯುತ್ತಾ ಇದೆ ಎಂದಿದ್ದಾರೆ.

ಇದನ್ನೂ ಓದಿ: ಯದುವೀರ್ ಒಡೆಯರ್​ಗೆ ಭರ್ಜರಿ ಗೆಲುವು -ಪ್ರತಾಪ್ ಸಿಂಹ ಹೇಳಿದ್ದೇನು..?

ಇದೇ ವೇಳೆ ಯದುವೀರ್ ಒಡೆಯರ್ ಅವರು ಸಂಸದರಾದ ಬಳಿಕ ವರ್ಧಂತಿಯಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ನಾನು ಸಂಸದನಾಗಿ ಮಾತ್ರವಲ್ಲ, ಚಾಮುಂಡೇಶ್ವರಿ ನಮ್ಮ ಕುಲ ದೇವತೆ. ಸಂಪ್ರದಾಯಕ್ಕೆ ಅನುಸಾರವಾಗಿ ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಿದ್ದೇವೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment