ರಜನಿಕಾಂತ್ ಕನ್ನಡ ದ್ರೋಹಿ ಎಂದ ವಾಟಾಳ್ ನಾಗರಾಜ್
‘ಜೈಲರ್’ನಿಂದ ಕನ್ನಡ ಸಿನಿಮಾಗಳಿಗೆ ಸಮಸ್ಯೆ ಆಗಲಿದೆ
ಅಂತವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಮಾಡಿದ್ದು ಸರಿಯಲ್ಲ
ನಿನ್ನೆ ರಾಜ್ಯದಲ್ಲಿ ತೆರೆಕಂಡ ‘ಜೈಲರ್’ ಸಿನಿಮಾ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ರಜನಿಕಾಂತ್ ಕನ್ನಡ ದ್ರೋಹಿ, ಕಾವೇರಿ ವಿಚಾರದಲ್ಲಿ ರಾಜ್ಯದ ವಿರುದ್ಧ ಮಾತನಾಡಿದ್ರು, ಅಂತವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
‘ಜೈಲರ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಈ ಸಿನಿಮಾದಲ್ಲಿ ನಟಿಸುವ ಮುನ್ನ ಯೋಚನೆ ಮಾಡಬೇಕಿತ್ತು ಅಂತ ಕಿಡಿಕಾರಿದ್ದಾರೆ. ಅಲ್ಲದೇ ‘ಜೈಲರ್’ ಚಿತ್ರ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕಿಂತ ದೊಡ್ಡ ಮಟ್ಟದಲ್ಲಿ ರಾಜ್ಯದಲ್ಲಿ ಬಿಡುಗಡೆಯಾಗಿದೆ. ಇದರಿಂದ ಕನ್ನಡ ಸಿನಿಮಾಗಳಿಗೆ ಸಮಸ್ಯೆ ಆಗಲಿದೆ, ಟಿಕೆಟ್ ದರ ನಿಯಂತ್ರಣ ಮಾಡದಿದ್ರೆ ಕಷ್ಟ ಅಂತ ಕಳವಳ ವ್ಯಕ್ತಪಡಿಸಿದ್ದಾರೆ.
ಜೈಲರ್ ಸಿನಿಮಾ ಬಗ್ಗೆ..
‘ಜೈಲರ್’ಚಿತ್ರ ಯು/ಎ ಪ್ರಮಾಣ ಪತ್ರ ಪಡೆದ ಸಿನಿಮಾವಾಗಿದೆ. ಈ ಚಿತ್ರದ ಅವಧಿ 2 ಗಂಟೆ 49 ನಿಮಿಷಗಳಿದ್ದು, ಸುಮಾರು 3 ಗಂಟೆಗಳ ಕಾಲ ಸಿನಿಮಾವಿದೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಜೈಲರ್ ಸಿನಿಮಾ ಮೂಡಿಬಂದಿದೆ. ಅನಿರುದ್ಧ್ ಸಂಗೀತ ನೀಡಿದ್ದಾರೆ. ತಮನ್ನಾ, ಮೋಹನ್ ಲಾಲ್, ಶಿವರಾಜ್ ಕುಮಾರ್, ಜಾಕಿ ಶ್ರಾಫ್, ನಾಗೇಂದ್ರ ಬಾಬು, ರಮ್ಯಾ ಕೃಷ್ಣ, ಸುನೀಲ್, ವಸಂತ ರವಿ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಿಸಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ