newsfirstkannada.com

ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಇದ್ದ ಕಾರು ಭೀಕರ ಅಪಘಾತ; ಏನಾಯ್ತು?

Share :

20-11-2023

  ಅಪಘಾತಕ್ಕಿಡಾದ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಕಾರು

  ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಬರುತ್ತಿದ್ದಾಗ ಅನಾಹುತ

  ಅಪಘಾತದಲ್ಲಿ ಬೈಕ್​​ ಸವಾರ, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್​ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿರೋ ಘಟನೆ ನಗರದ ಸಿಂದಗಿ ಬೈಪಾಸ್ ಬಳಿ ನಡೆದಿದೆ. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ್‌ ಅವರಿದ್ದ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದೆ.

ವಿಜಯಪುರಕ್ಕೆ ಸಿಎಂ ಸಿದ್ದರಾಮಯ್ಯನವರು ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಕಾರಿನಲ್ಲಿ ಹೋಗಿ ಬರುತ್ತಿದ್ದರು. ಇದೇ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಹಾಗೂ ಬೈಕ್ ಸವಾರನಿಗೆ ಗಾಯಗಳಾಗಿವೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೊತೆಗೆ ಬಾಗಲಕೋಟೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಅವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವಿಜಯಪುರ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಇದ್ದ ಕಾರು ಭೀಕರ ಅಪಘಾತ; ಏನಾಯ್ತು?

https://newsfirstlive.com/wp-content/uploads/2023/11/veena-3.jpg

Load More