ಕೈಮುಗಿದು ನ್ಯಾಯಾಧೀಶರ ಮುಂದೆ ನಿಂತಿದ್ದ ಪ್ರಜ್ವಲ್ ರೇವಣ್ಣ.. ಆಗಸ್ಟ್ 1ಕ್ಕೆ ತೀರ್ಪು ಪ್ರಕಟ..!

author-image
Ganesh
Updated On
ಪ್ರಜ್ವಲ್​ ರೇವಣ್ಣ ಮೇಲೆ ಎಷ್ಟು ಕೇಸ್​ಗಳಿವೆ.. ಬೇಲ್​ ಅರ್ಜಿ ವಜಾಕ್ಕೆ ಕೋರ್ಟ್​ ಕೊಟ್ಟ ಕಾರಣವೇನು?
Advertisment
  • ಆರೋಪಿ ಪ್ರಜ್ವಲ್ ರೇವಣ್ಣಗೆ ಆಗಸ್ಟ್​ 1 ರಂದು ಬಿಗ್ ಡೇ
  • ಮನೆ ಕೆಲಸದಾಕೆ‌ ನೀಡಿದ್ದ ಪ್ರಕರಣದಲ್ಲಿ ತೀರ್ಪು ನೀಡಲಿದೆ
  • ಕೋರ್ಟ್​ ತೀರ್ಪಿನ ಮೇಲೆ ಪ್ರಜ್ವಲ್ ರಾಜಕೀಯ ಭವಿಷ್ಯ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಪ್ರಕರಣದ ತೀರ್ಪು ಆಗಸ್ಟ್​ 1ಕ್ಕೆ ಪ್ರಕಟವಾಗಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಲಿದ್ದಾರೆ.

ಇವತ್ತಿನ ವಿಚಾರಣೆಯಲ್ಲಿ ಏನಾಯ್ತು..?

ಇವತ್ತಿನ ವಿಚಾರಣೆಯಲ್ಲಿ ಕೋರ್ಟ್​ ಎರಡೂ ಕಡೆ ವಕೀಲರಿಂದ ಕೆಲವು ಸ್ಪಷ್ಟನೆಗಳನ್ನು ಕೇಳಿತು. ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತು. ಗೂಗಲ್ ಮ್ಯಾಪ್​​ ಅನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಸ್ಯಾಮ್​ಸಂಗ್ ಜೆ 4 ಮೊಬೈಲ್ ಸೀಜ್ ಮಾಡಿರುವ ಬಗ್ಗೆಯೂ ವಿವರಣೆ ಕೇಳಿದೆ. ಇನ್ನು ಇವತ್ತೂ ಕೂಡ ಆರೋಪಿ ಪ್ರಜ್ವಲ್ ರೇವಣ್ಣರನ್ನು ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಮಾಜಿ ಸಂಸದ ಕೈ ಮುಗಿದು ನ್ಯಾಯಾಧೀಶರ ಮುಂದೆ ನಿಂತಿದ್ದರು.

ಇದನ್ನೂ ಓದಿ: ಐದನೇ ಟೆಸ್ಟ್​ಗೂ ಮುನ್ನವೇ ಕಿತ್ತಾಟ.. ಕೋಚ್ ಗಂಭೀರ್​​ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ..? Video

publive-image

ಒಟ್ಟು ನಾಲ್ಕು ಕೇಸ್​..

ಈ ತೀರ್ಪು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧರಿಸುವುದರಿಂದ ಭಾರಿ ಮಹತ್ವ ಪಡೆದುಕೊಂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್​ಗಳಿವೆ. ಈ ನಾಲ್ಕು ಕೇಸ್​ಗಳ ಪೈಕಿ ಈಗ ಮೊದಲ ಕೇಸ್ ತೀರ್ಪು ಪ್ರಕಟವಾಗುತ್ತಿದೆ. ಈ ಕೇಸ್​ನಲ್ಲಿ ಈಗಾಗಲೇ ವಾದ- ಪ್ರತಿವಾದ ಮುಗಿದಿದ್ದು, ಸಾಕ್ಷ್ಯಗಳ ವಿಚಾರಣೆ ಕೂಡ ಮುಗಿದಿದೆ. ಆಗಸ್ಟ್​ 1 ರಂದು ಪ್ರಜ್ವಲ್ ಅಪರಾಧಿಯೋ ಅಥವಾ ಅಲ್ಲವೋ ಎಂದು ಕೋರ್ಟ್ ಮೊದಲಿಗೆ ತೀರ್ಪು ನೀಡಲಿದೆ. ಒಂದು ವೇಳೆ ಅಪರಾಧಿ ಎಂದು ತೀರ್ಪು ನೀಡಿದರೆ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುತ್ತೆ. ಶಿಕ್ಷೆಯ ಪ್ರಮಾಣದ ಬಗ್ಗೆ ವಾದ-ಪ್ರತಿವಾದ ನಡೆಯಲಿದೆ. ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ವಿಧಿಸಬೇಕೆಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರತಿವಾದ ಮಂಡಿಸುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣಗೆ ನಾಲ್ಕು ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲುಶಿಕ್ಷೆಯಾದರೆ ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಆದಾದ ನಂತರ 6 ವರ್ಷಗಳವರೆಗೂ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಕೋರ್ಟ್​ ತೀರ್ಪಿನ ಮೇಲೆ ಪ್ರಜ್ವಲ್ ಅವರ ರಾಜಕೀಯ ಭವಿಷ್ಯ ನಿಂತಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment