ತಡರಾತ್ರಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ಗೆ ಎದೆ ನೋವು.. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

author-image
admin
Updated On
ಮಿಮಿಕ್ರಿಯಿಂದ ಮನನೊಂದ ಪ್ರಧಾನಿ ಮೋದಿ; ಉಪರಾಷ್ಟ್ರಪತಿಗೆ ಕರೆ ಮಾಡಿ ನೋವು ಹೇಳಿಕೊಂಡ್ರಂತೆ..!
Advertisment
  • ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಿಗೆ ಎದೆನೋವು
  • ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಜೆ.ಪಿ ನಡ್ಡಾ
  • ಏಮ್ಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (CCU) ಚಿಕಿತ್ಸೆ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಜಗದೀಪ್ ಧನಕರ್‌ ಅವರಿಗೆ ಅನಾರೋಗ್ಯ ಹಾಗೂ ಎದೆ ನೋವು ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಿಗೆ 73 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಏಮ್ಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (CCU) ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಮ್ಸ್ ಆಸ್ಪತ್ರೆ ಹೃದ್ರೋಗ ವಿಭಾಗದ ಮುಖ್ಯಸ್ಥರಾದ ಡಾ. ರಾಜೀವ್ ನಾರಂಗ್ ತಂಡ ಉಪರಾಷ್ಟ್ರಪತಿಗೆ ಅಗತ್ಯ ತಪಾಸಣೆ ನಡೆಸಿದ್ದು, ಚಿಕಿತ್ಸೆ ಮುಂದುವರಿಸಿದ್ದಾರೆ. ಎದೆ ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಲ್ಪ ಸುಸ್ತಾದಂತೆ ಕಂಡು ಬಂದಿದ್ದರು. ಸದ್ಯದ ಮಾಹಿತಿ ಪ್ರಕಾರ ಜಗದೀಪ್ ಧನಕರ್‌ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮತ್ತೊಮ್ಮೆ ಉಪರಾಷ್ಟ್ರಪತಿ ಧನಕರ್, ಪ್ರಧಾನಿ ಮೋದಿ ಬಗ್ಗೆ ಮಿಮಿಕ್ರಿ ಮಾಡಿದ ಟಿಎಂಸಿ ಸಂಸದ 

ಉಪರಾಷ್ಟ್ರಪತಿ ಜಗದೀಪ್‌ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಏಮ್ಸ್‌ಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೇಂದ್ರ ಹಿರಿಯ ನಾಯಕರು ಏಮ್ಸ್ ಆಸ್ಪತ್ರೆ ವೈದ್ಯರಿಂದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment