/newsfirstlive-kannada/media/post_attachments/wp-content/uploads/2024/07/Vicky-Pedia1.jpg)
ಸೋಶಿಯಲ್ ಮೀಡಿಯಾದಲ್ಲಿ ಹೊಸ ಹೊಸ ವಿಡಿಯೋವನ್ನು ಶೇರ್ ಮಾಡಿಕೊಂಡು ನೆಟ್ಟಿಗರಿಗೆ ಮನರಂಜನೆ ನೀಡುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್​ಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ.
ಹೌದು, ಭಿನ್ನ ವಿಭಿನ್ನ ರೀಲ್ಸ್​ಗಳನ್ನು​ ಶೇರ್ ಮಾಡಿ ಸಖತ್​ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್​ಗೆ ಪೊಲೀಸರು ಖಡಕ್ ವಾರ್ನಿಂಗ್​ ಕೊಟ್ಟಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೀಲ್ಸ್​ವೊಂದನ್ನು ಶೇರ್ ಮಾಡಿಕೊಂಡಿದ್ದರು. ಇದೇ ರೀಲ್ಸ್​ ಈಗ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಇನ್​ಸ್ಟಾಗ್ರಾಮ್ ಖಾತೆಯಲ್ಲಿ ವಿಕ್ಕಿಪೀಡಿಯಾ ವಿಕಾಸ್ ಡ್ರಗ್ಸ್ (ಮಾದಕ ವಸ್ತು ವ್ಯಸನ) ವಿಚಾರಕ್ಕೆ ಸಂಬಂಧಿಸಿದಂತ ರೀಲ್ಸ್​ವೊಂದನ್ನು ಶೇರ್ ಮಾಡಿಕೊಂಡಿದ್ದರು.
/newsfirstlive-kannada/media/post_attachments/wp-content/uploads/2024/07/Vicky-Pedia2.jpg)
ಇದೇ ವಿಚಾರಕ್ಕೆ ವಿಕ್ಕಿಪೀಡಿಯಾ ವಿಕಾಸ್​ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವಿಕ್ಕಿಪೀಡಿಯಾ ವಿಕಾಸ್​ ಅವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರಂತೆ. ನಾನು ನಂದಿನಿ ಬೆಂಗಳೂರಿಗೆ ಬಂದೀನಿ ಸಾಂಗ್ ಮೂಲಕ ಫೇಮಸ್ ಆಗಿದ್ದರು ವಿಕಾಸ್. ವಿಭಿನ್ನ ಶೈಲಿಯಲ್ಲಿ ಕಂಟೆಂಟ್ ಕ್ರಿಯೇಟ್ ಮಾಡಿ ರೀಲ್ಸ್ ಮಾಡುತ್ತಿದ್ದರು. ವಿಕಾಸ್​ಗೆ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಅನ್ನು ಹೊಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us