newsfirstkannada.com

‘ಪೊಲೀಸರು ಬೇರೆಯವರನ್ನ ಅರೆಸ್ಟ್ ಮಾಡಿದ್ದಾರೆ’- ಹಾನಗಲ್ ಗ್ಯಾಂಗ್ ರೇಪ್ ಸಂತ್ರಸ್ತೆ ಆರೋಪ

Share :

Published January 14, 2024 at 6:01pm

    ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು

    ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ನಿಯೋಜಿಸಿಲ್ಲ!

    ಸ್ಥಳ ಪರಿಶೀಲನೆ ಎಂದು ಹೇಳಿ ಮನೆಗೆ ತಂದು ಬಿಟ್ಟಿದ್ದಾರೆ-ಸಂತ್ರಸ್ತೆ

ಹಾವೇರಿ: ಹಾನಗಲ್​ನ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಂತ್ರಸ್ಥ ಮಹಿಳೆ ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಆರೋಪ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮೊದಲ ಬಾರಿಗೆ ಸಂತ್ರಸ್ತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಹಾನಗಲ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡದೇ ನಿವಾಸಕ್ಕೆ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಿದ್ದಾಳೆ.

ಇದನ್ನು ಓದಿ: ಹಾನಗಲ್​ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಟ್ವಿಸ್ಟ್​; ಎಸ್​ಪಿ ಅಂಶು ಕುಮಾರ್​ರಿಂದ ಮಹತ್ವದ ಮಾಹಿತಿ

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ ಮಹಿಳೆ, ಅತ್ಯಾಚಾರ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ಪೊಲೀಸರು ಬೇರೆಯವರನ್ನ ಅರೆಸ್ಟ್ ಮಾಡಿದ್ದಾರೆ. ಪೊಲೀಸರು ಇಬ್ಬರ ಫೋಟೋ ತೋರಿಸಿದ್ದರು.

ಆ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ. ಆರು ಮಂದಿ ಬಂಧಿಸಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರಾಗಿದ್ದಾರೆ. ವಿಡಿಯೋದಲ್ಲಿ ಇದ್ದವರು ಆ ಇಬ್ಬರಲ್ಲ. ಸ್ಥಳ ಪರಿಶೀಲನೆ ಎಂದು ಹೇಳಿ ಇದೀಗ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೆ ಮನೆಗೆ ಬಿಟ್ಟು ಹೋಗಿದ್ದಾರೆ. ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ನಿಯೋಜಿಸಿಲ್ಲ ಎಂದಿದ್ದಾಳೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಪೊಲೀಸರು ಬೇರೆಯವರನ್ನ ಅರೆಸ್ಟ್ ಮಾಡಿದ್ದಾರೆ’- ಹಾನಗಲ್ ಗ್ಯಾಂಗ್ ರೇಪ್ ಸಂತ್ರಸ್ತೆ ಆರೋಪ

https://newsfirstlive.com/wp-content/uploads/2023/12/HVR_CASE.jpg

Load More