ಡೆಂಘೀ ಮಹಾಮಾರಿ.. PUC ಡಿಸ್ಟಿಂಕ್ಷನ್‌ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿನಿ ದಾರುಣ ಸಾವು

author-image
Veena Gangani
Updated On
ಡೆಂಘೀ ಮಹಾಮಾರಿ.. PUC ಡಿಸ್ಟಿಂಕ್ಷನ್‌ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿನಿ ದಾರುಣ ಸಾವು
Advertisment
  • ದ್ವಿತೀಯ ಪಿಯುಸಿಯಲ್ಲಿ ಶೇ 95% ಅಂಕ ಪಡೆದುಕೊಂಡಿದ್ದ ಯಶಸ್ವಿನಿ
  • ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಘೀ ಸಾವಿನ ಸಂಖ್ಯೆ
  • ಡೆಂಘೀ ಮಹಾಮಾರಿ ಅಬ್ಬರಕ್ಕೆ ನಾಮಗೊಂಡ್ಲು ಗ್ರಾಮದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಟ್ಟಹಾಸ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.

ಇದನ್ನೂ ಓದಿ: ಸಿಗರೇಟ್ ಸೇದದವರಿಗೆ ಲಂಗ್ ಕ್ಯಾನ್ಸರ್‌.. ಅಪರ್ಣಾ ಸಾವಿನ ಬೆನ್ನಲ್ಲೇ ಹೆಚ್ಚಿದ ಆತಂಕ; ಏನಿದು ಅಪಾಯ?

ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಘೀಗೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ನಾಮಗೊಂಡ್ಲು ಗ್ರಾಮದ 18 ವರ್ಷದ ಯಶಸ್ವಿನಿ ಮೃತ ದುರ್ದೈವಿ. ಮೃತ ಯಶಸ್ವಿನಿ ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರಂತೆ.

ಹೀಗಾಗಿ ಆಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಯಶಸ್ವಿನಿ ಮೃತಪಟ್ಟಿದ್ದಾಳೆ.ಮೃತ ಯುವತಿ ಯಶಸ್ವಿನಿ ದ್ವಿತೀಯ ಪಿಯುಸಿಯಲ್ಲಿ ಶೇ 95% ಅಂಕ ಪಡೆದಿದ್ದಳು. ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಯುವತಿ ಸಾವನ್ನಪ್ಪುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment