/newsfirstlive-kannada/media/post_attachments/wp-content/uploads/2025/05/manu-madiyuru5.jpg)
ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್, ಹಾಸ್ಯ ನಟ ಮಡೆನೂರು ಮನು ಮೇಲೆ ಕಿರುತೆರೆ ನಟಿ ಅತ್ಯಾಚಾರದ ಆರೋಪ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಮೂಲಕ ಫೇಮಸ್ ಆಗಿದ್ದ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ:ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ನಟಿಗೆ ಬ್ಲಾಕ್ ಮೇಲ್.. ಮಡೆನೂರು ಮನು ಮೇಲೆ ಸಾಲು ಸಾಲು ಆರೋಪ
ಪೊಲೀಸರಿಗೆ ನೀಡಿದ ಎಫ್ಐಆರ್ನಲ್ಲಿ ಸಂತ್ರಸ್ತೆಯೂ ತನಗಾದ ಮೋಸವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೇ ಈ ಬಗ್ಗೆ ನ್ಯೂಸ್ಫಸ್ಟ್ಗೆ ದೂರವಾಣಿ ಕರೆ ಮೂಲಕ ಸಂತ್ರಸ್ತೆ ಪ್ರತಿಕ್ರಿಯೆ ನೀಡಿದ್ದಾರೆ. ಮಡೆನೂರು ಮನು ನನ್ನ ಮೇಲೆ ಅತ್ಯಾಚಾರ ಮಾಡಿರೋದು ನಿಜ. ನನ್ನ ಮೇಲೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಎಲ್ಲವನ್ನೂ ಕೊಡ್ತೀನಿ. ನನ್ನ ಬಳಿ ಎಲ್ಲಾ ಸಾಕ್ಷಿಗಳಿವೆ. ಸಾಕ್ಷಿ ಇಲ್ಲದೆ ನಾನು ಮಾತನಾಡುತ್ತಿಲ್ಲ. ಪೊಲೀಸರಿಗೆ ದೂರು ನೀಡುವುದಾಗಿ ಮನುಗೆ ಮೊದಲೇ ಹೇಳಿದ್ದೆ ಅಂತ ಮಾಹಿತಿ ಹಂಚಿಕೊಂಡಿದ್ದಾರೆ.
2022ರ ಡಿಸೆಂಬರ್ನಲ್ಲಿ ನಟಿಯ ಮನೆಗೆ ಹೋಗಿ ತಾಳಿ ಕಟ್ಟಿ ಅತ್ಯಾಚಾರ ಎಸಗಿದ್ದಾರೆ. ತನ್ನ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ. ನಾಯಕನಾಗಿರೋ ಸಿನಿಮಾಗೆ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಅಂತ ನಟಿ ಗಂಭೀರ ಆರೋಪ ಮಾಡಿದ್ದಾರೆ.
ಹೀಗಾಗಿ ಸಂತ್ರಸ್ತೆ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಇನ್ನೂ ತನ್ನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗ್ತಿದ್ದಂತೆ ನಟ ಮಡೆನೂರು ಮನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಆರೋಪಿ ನಟನ ಪತ್ತೆಗಾಗಿ ಪೊಲೀಸರು ಎರಡು ಪ್ರತ್ಯೇಕ ತಂಡ ರಚನೆ ಮಾಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ಶುರುವಾಗಿದೆ. ಹೀಗಾಗಿ ಮಂಡ್ಯ ಹಾಗೂ ಹಾಸನದಲ್ಲಿ ನಟನ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ