Advertisment

ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ವಿಡಿಯೋ.. ಅಪ್ರಾಪ್ತ ಅರೆಸ್ಟ್​

author-image
Bheemappa
Updated On
ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ವಿಡಿಯೋ.. ಅಪ್ರಾಪ್ತ ಅರೆಸ್ಟ್​
Advertisment
  • ಮೆಡಿಕಲ್ ಕಾಲೇಜಿಗೆ ರೋಗಿ ಅಂದ್ಕೊಂಡು ಬಂದಿದ್ದ ಅಪ್ರಾಪ್ತ
  • ಲೇಡಿಸ್ ಟಾಯ್ಲೆಟ್​ಗೆ ಹೋಗಿ ಮೊಬೈಲ್ ಇಟ್ಟು ಚಿತ್ರೀಕರಣ
  • ಕೋರ್ಟ್​ ಮುಂದೆ ಅಪ್ರಾಪ್ತನ ಹಾಜರುಪಡಿಸಿದ ಪೊಲೀಸರು

ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ್ದ ಅಪ್ರಾಪ್ತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

Advertisment

ಮೇ‌ 6 ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತನು ಬಳಿಕ ಲೇಡಿಸ್ ಟಾಯ್ಲೆಟ್​ಗೆ ಹೋಗಿ ಅಲ್ಲಿ ತನ್ನ ಮೊಬೈಲ್ ಇಟ್ಟಿದ್ದನು. ಆದರೆ ಮೊಬೈಲ್ ಒಳಗೆ ಇಟ್ಟಿದ್ದ ವೇಳೆಯೇ ಯಾವುದೋ ಫೋನ್ ಕಾಲ್ ಬಂದಿದ್ದರಿಂದ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಕಾಲೇಜಿನ ವಾಚ್​ಮೆನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ: ಮಹಿಳೆಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಜೊತೆಗಾರ.. ಕಾರಣ..?

ನಂತರ ಪೊಲೀಸ್ ಠಾಣೆಗೆ ಕಾಲೇಜಿನ ವಾಚ್​ಮೆನ್ ದೂರು ನೀಡಿದ್ದನು. ಈ ದೂರಿನ ಆಧಾರದ ಮೇಲೆ ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. 17 ವರ್ಷದ ಅಪ್ರಾಪ್ತ ಕೃತ್ಯ ಎಸಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment