ಇಂದು ಬೆಳಗಿನ ಜಾವ ಖಾಸಗಿ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಸಂಚರಿಸುವ ವೇಳೆ ಅವಘಡ
ಬೆಂಕಿ ಕಂಡಾಗ ಕಾನಾಹೊಸಹಳ್ಳಿ ಬಳಿ NH-50 ರಸ್ತೆಯಲ್ಲಿ ಬಸ್ ನಿಲ್ಲಿಸಿದ ಸವಾರ
ವಿಜಯನಗರ: ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಬಳಿ NH -50 ರಸ್ತೆಯಲ್ಲಿ ನಡೆದಿದೆ. ಬಸ್ ಟೈರ್ ಸಿಡಿದು ಬೆಂಕಿ ಆವರಿಸಿದೆ.
ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಹಟ್ಟಿ ಚಿನ್ನದ ಗಣಿ ಕಡೆಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ 30 ಜನರನ್ನು ಸಾಗಿಸುತ್ತಿದ್ದ ಬಸ್ ಟೈರ್ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ಬಸ್ ನಿಲ್ಲಿಸಿದ್ದಾನೆ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.
ಚಾಲಕನ ಸಮಯಪ್ರಜ್ಞೆಗೆ 30 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ