newsfirstkannada.com

ಬಿಜೆಪಿಗೆ ಮತ್ತೊಂದು ಬಿಗ್ ಶಾಕ್; ಪಕ್ಷಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ ಹಿರಿಯ ನಟಿ ವಿಜಯಶಾಂತಿ

Share :

17-11-2023

    ತೆಲಂಗಾಣ ರಾಜಕೀಯದಲ್ಲಿ ಭಾರೀ ಬದಲಾವಣೆ

    ಬಿಜೆಪಿ ತೊರೆದು ಯಾವ ಪಕ್ಷ ಸೇರುತ್ತಿದ್ದಾರೆ ನಟಿ?

    ನವೆಂಬರ್ 30 ರಂದು ವಿಧಾನಸಭೆಗೆ ಚುನಾವಣೆ

ತೆಲಂಗಾಣ ವಿಧಾನಸಭಾ ಚುನಾವಣೆ ಸಮೀಪಿಸ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪಕ್ಷದ ನಾಯಕಿ, ಹಿರಿಯ ನಟಿ ವಿಜಯಶಾಂತಿ ದಿಢೀರ್​ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ನಾಲ್ಕು ದಿನಗಳ ಹಿಂದೆ ಬಿಜೆಪಿ ಬಿಡಲ್ಲ ಎಂದಿದ್ದ ವಿಜಯಶಾಂತಿ ಇದ್ದಕ್ಕಿದ್ದಂತೆ ರಾಜೀನಾಮೆ ಘೋಷಿಸಿರೋದು ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಕಿಶನ್ ರೆಡ್ಡಿ ಅವರಿಗೆ ರಾಜೀನಾಮೆ ಪತ್ರ ಕಳಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಜಯಶಾಂತಿ ಬೇರೆ ಪಕ್ಷ ಸೇರುವ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.

ಮೂಲಗಳ ಮಾಹಿತಿ ಪ್ರಕಾರ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡ ಮಲ್ಲು ರವಿ ಮಾತಾಡಿದ್ದರು. ವಿಜಯಶಾಂತಿ ಕಾಂಗ್ರೆಸ್ ಸೇರ್ತಾರೆ ಎಂದಿದ್ದರು. ಆಗ ಪ್ರತಿಕ್ರಿಯಿಸಿದ್ದ ವಿಜಯಶಾಂತಿ ನಾನು ಇಂಥದ್ದನ್ನು ಖಂಡಿಸುತ್ತೇನೆ. ಕಾಂಗ್ರೆಸ್​ ಸೇರುವ ಪ್ರಮೇಯ ತನಗಿಲ್ಲ ಎಂದಿದ್ದರು​, ಇದಾದ ನಾಲ್ಕೇ ದಿನದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿರೋ ವಿಜಯಶಾಂತಿ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿಗೆ ಮತ್ತೊಂದು ಬಿಗ್ ಶಾಕ್; ಪಕ್ಷಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ ಹಿರಿಯ ನಟಿ ವಿಜಯಶಾಂತಿ

https://newsfirstlive.com/wp-content/uploads/2023/11/VIJAYASHANTI.jpg

Load More