/newsfirstlive-kannada/media/post_attachments/wp-content/uploads/2025/06/VINAY-KULKARNI.jpg)
ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ವಿನಯ್ ಕುಲಕರ್ಣಿ ಮರಳಲಿದ್ದಾರೆ.
ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.
ಇದನ್ನೂ ಓದಿ: Plane crash: ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ.. ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ..
ಜೂನ್ 6 ರಂದು ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ರದ್ದುಗೊಳಿಸಿತ್ತು. ಜೊತೆಗೆ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ಗೆ ಬಂದು ಶರಣಾಗಿದ್ದಾರೆ.
ಇದನ್ನೂ ಓದಿ: ಪ್ರೀತಿಯ ಅಜ್ಜಿ ಹುಟ್ಟುಹಬ್ಬಕ್ಕೆ ಲಂಡನ್ನಿಂದ ಬಂದಿದ್ದ ಅಕ್ಕ-ತಂಗಿ.. ಆ ಖುಷಿಯ ಕ್ಷಣ ಹೆಚ್ಚು ದಿನ ಉಳಿಯಲೇ ಇಲ್ಲ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ