VineshPhogat: ಅಗ್ನಿ ಪರೀಕ್ಷೆಯಲ್ಲಿ ವಿಜಯ ಪತಾಕೆ.. ಗೆದ್ದು ಬೀಗಿದ ವಿನೇಶ್ ಫೋಗಟ್!

author-image
admin
Updated On
VineshPhogat: ಅಗ್ನಿ ಪರೀಕ್ಷೆಯಲ್ಲಿ ವಿಜಯ ಪತಾಕೆ.. ಗೆದ್ದು ಬೀಗಿದ ವಿನೇಶ್ ಫೋಗಟ್!
Advertisment
  • ಹೈವೋಲ್ಟೇಜ್‌ ಅಖಾಡದಲ್ಲಿ ಗೆಲುವು ಸಾಧಿಸಿದ ವಿನೇಶ್ ಫೋಗಟ್‌
  • ಬಿಜೆಪಿಯ ಅಭ್ಯರ್ಥಿ ಮಾಜಿ ಸೇನಾಧಿಕಾರಿ, ಕ್ಯಾಪ್ಟನ್ ಯೋಗೇಶ್ ಸೋಲು
  • ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಫೋಗಟ್ ಬಲ ಪ್ರದರ್ಶನ!

ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ ಅವರು ವಿಜಯ ಪತಾಕೆ ಹಾರಿಸಿದ್ದಾರೆ. ವಿನೇಶ್ ಫೋಗಟ್ ಅವರು ಹರಿಯಾಣದ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ರೋಚಕ ಚುನಾವಣಾ ಫಲಿತಾಂಶದಲ್ಲಿ ವಿನೇಶ್ ಫೋಗಟ್ ಗೆಲುವು ಸಾಧಿಸಿದ್ದು ಸಂಭ್ರಮಾಚರಣೆ ಶುರುವಾಗಿದೆ.

ಹರಿಯಾಣ ಎಲೆಕ್ಷನ್‌ನಲ್ಲಿ ಈ ಬಾರಿ ಜೂಲಾನಾ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್‌ ಅಖಾಡವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಅವರ ವಿರುದ್ಧ ಬಿಜೆಪಿಯಿಂದ ಮಾಜಿ ಸೇನಾಧಿಕಾರಿ, ಕ್ಯಾಪ್ಟನ್ ಯೋಗೇಶ್ ಬೈರಾಗಿ ಹಾಗೂ ಮಾಜಿ ಕುಸ್ತಿ ಪಟು ಕವಿತಾ ದಲ್ಲಾಲ್ ಅವರು ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದರು.

publive-image

ಪ್ಯಾರಿಸ್ ಒಲಿಂಪಿಕ್ಸ್ ಬಳಿಕ ನಿವೃತ್ತಿ ಘೋಷಿಸಿದ್ದ ವಿನೇಶ್ ಫೋಗಟ್ ಅವರು ಮೊಟ್ಟ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದರು. ಮೊದಲ ಚುನಾವಣೆಯ ಅಗ್ನಿ ಪರೀಕ್ಷೆಯಲ್ಲೇ ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ ಅವರು ಗೆಲುವಿನ ರಣಕೇಕೆ ಹಾಕಿದ್ದಾರೆ.

ಇದನ್ನೂ ಓದಿ: Haryana election ರೋಚಕ ಫಲಿತಾಂಶದಲ್ಲಿ ವಿನೇಶ್ ಫೋಗಟ್‌ಗೆ ಮುನ್ನಡೆ! 

ಜೂಲಾನಾ ವಿಧಾನಸಭಾ ಕ್ಷೇತ್ರದಲ್ಲಿ ವಿನೇಶ್ ಫೋಗಟ್ ಅವರು ಬಿಜೆಪಿಗೆ ಸೆಡ್ಡು ಹೊಡೆದಿದ್ದು ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಮಣಿಸಿದ್ದಾರೆ. ಸದ್ಯದ ಮತ ಎಣಿಕೆಯ ಮುಕ್ತಾಯಕ್ಕಾಗಿ ವಿನೇಶ್ ಫೋಗಟ್‌ ಅವರು ತಮ್ಮ ಎದುರಾಳಿ ವಿರುದ್ಧ ಬರೋಬ್ಬರಿ 6000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

publive-image

ಹರಿಯಾಣದಲ್ಲಿ ಕಾಂಗ್ರೆಸ್ ಹಿನ್ನೆಡೆ ಅನುಭವಿಸಿದ್ದರು ವಿನೇಶ್ ಫೋಗಟ್ ಅವರು ಗೆಲುವು ಜೂಲಾನಾದಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ. ವಿನೇಶ್ ಫೋಗಟ್ ಅವರ ಗೆಲುವಿಗೆ ಕಾಂಗ್ರೆಸ್ ನಾಯಕರ ಸಂಭ್ರಮಾಚರಣೆ ಶುರುವಾಗಿದೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಸಾಧ್ಯವಾಗದೇ ನಿರಾಸೆ ಅನುಭವಿಸಿದ್ದ ವಿನೇಶ್ ಫೋಗಟ್ ಅವರು ಚುನಾವಣಾ ರಾಜಕೀಯದಲ್ಲಿ ಗೆದ್ದು ಬೀಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ವಿನೇಶ್ ಫೋಗಟ್ ಅವರು ತಮ್ಮ ಶಕ್ತಿ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ವಿನೇಶ್ ಫೋಗಟ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment