BREAKING: ಬಿಗ್ ಶಾಕ್ ಕೊಟ್ಟ ವಿರಾಟ್ ಕೊಹ್ಲಿ; ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ

author-image
admin
Updated On
ದ ವಾರಿಯರ್ ಕಿಂಗ್‌.. ಟೆಸ್ಟ್ ಕ್ರಿಕೆಟ್ ನಿಮ್ಮನ್ನ ಮಿಸ್ ಮಾಡಿಕೊಳ್ಳುತ್ತೆ; ಫ್ಯಾನ್ಸ್‌ ಓದಲೇಬೇಕಾದ ಸ್ಟೋರಿ!
Advertisment
  • ರೋಹಿತ್ ಶರ್ಮಾ ಬಳಿಕ ಕೊಹ್ಲಿ ಕೂಡ ನಿವೃತ್ತಿ ಘೋಷಣೆ
  • 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಟೆಸ್ಟ್‌ಗೆ ಎಂಟ್ರಿ
  • ಇಂಗ್ಲೆಂಡ್‌ ವಿರುದ್ಧ ಸರಣಿಗೂ ಮುನ್ನ ಟೀಂ ಇಂಡಿಯಾ ಡಬಲ್ ಶಾಕ್‌!

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿಕ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ.

ವಿರಾಟ್ ಕೊಹ್ಲಿ ಅವರು 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

publive-image

2025 ಐಪಿಎಲ್ ಮುಗಿದ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ ರೆಡಿಯಾಗುತ್ತಿದೆ. ಇಂಗ್ಲೆಂಡ್‌ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ಘೋಷಿಸದಂತೆ ಹಲವು ಕ್ರಿಕೆಟ್ ದಿಗ್ಗಜರು ಮನವಿ ಮಾಡಿದ್ದರು.

ಇದನ್ನೂ ಓದಿ: RCB ಕ್ಯಾಂಪ್​ನಿಂದ ಫ್ಯಾನ್ಸ್​ಗೆ ಗುಡ್​ನ್ಯೂಸ್.. ಬೆಂಗಳೂರು ತಂಡಕ್ಕೆ ಬಂತು ಆನೆಬಲ 

ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಬಯಸಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಇಂದು ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿಕ ಕೊಹ್ಲಿಯಿಂದಲೂ ನಿವೃತ್ತಿ ಘೋಷಿಸಿರೋದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ತಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment